Featured

ಸಿಂಗಾಪುರದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆ ; ದಕ್ಷಿಣಾ ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು – Vishwanews24

ಸಿಂಗಾಪುರದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆ ; ದಕ್ಷಿಣಾ ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು – Vishwanews24

ಸಿಂಗಾಪುರ: ದಕ್ಷಿಣ ಆಫ್ರಿಕಾದಿಂದ ಸಿಂಗಾಪುರಕ್ಕೆ ಪ್ರಯಾಣ ಮಾಡಿದ್ದ ಇಬ್ಬರಲ್ಲಿ ಕೊರೊನಾ ವೈರಸ್‌ ಹೊಸ ರೂಪಾಂತರಿ ಓಮಿಕ್ರಾನ್‌ ಪತ್ತೆಯಾಗಿದೆ. ಸಿಂಗಾಪುರದಲ್ಲೂ ಓಮಿಕ್ರಾನ್‌ ಮೊದಲ ಬಾರಿಗೆ ತನ್ನ ಖಾತೆ ತೆರೆದಿದೆ.

ಜೋಹನ್ಸ್‌ಬರ್ಗ್‌ನಿಂದ ಪ್ರಯಾಣಿಸಿದ್ದ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆಯಾಗಿರುವುದು ಪ್ರಾಥಮಿಕ ಪರೀಕ್ಷೆಯಿಂದ ದೃಢಪಟ್ಟಿದೆ. ಅವರನ್ನು ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕಿತರು ಪ್ರಯಾಣಿಸಿದ್ದ ವಿಮಾನದಲ್ಲೇ 19 ಮಂದಿ ಪ್ರಯಾಣ ಬೆಳೆಸಿದ್ದರು. ಅವರನ್ನೂ ಪರೀಕ್ಷೆ ಒಳಪಡಿಸಲಾಗಿದ್ದು, ಕೋವಿಡ್‌ ನೆಗೆಟಿವ್‌ ಬಂದಿದೆ. ಆದಾಗ್ಯೂ ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಓಮಿಕ್ರಾನ್‌ ಸೋಂಕಿತರು ಕೋವಿಡ್‌ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಕೆಮ್ಮು ಮತ್ತು ಗಂಟಲು ಕೆರೆತದ ಸೌಮ್ಯ ಲಕ್ಷಣಗಳು ಇದ್ದ ಕಾರಣ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸೋಂಕಿತರಲ್ಲಿ ಒಬ್ಬರು 44 ವಯಸ್ಸಿನ (ಪುರುಷ) ಸಿಂಗಾಪುರ ಮೂಲದವರೇ ಆಗಿದ್ದಾರೆ. ಅವರು ಮೊಜಾಂಬಿಕ್‌ ಮೂಲಕ ಜೋಹಾನ್ಸ್‌ಬರ್ಗ್‌ಗೆ ತೆರಳಿದ್ದರು. ನ.29ರಂದು ಅವರು ಮೆಜಾಂಬಿಕ್‌ನಿಂದ ತೆರಳುವಾಗ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್‌ ನೆಗೆಟಿವ್‌ ಬಂದಿತ್ತು. ಮತ್ತೊಬ್ಬರು 41 ವಯಸ್ಸಿನ ಮಹಿಳೆ ಸಿಂಗಾಪುರದವರೇ ಆಗಿದ್ದು, ದಕ್ಷಿಣ ಆಫ್ರಿಕಾದಿಂದ ನೇರವಾಗಿ ಆಗಮಿಸಿದ್ದರು ಎಂದು ಸಚಿವಾಲಯವು ಮಾಹಿತಿ ನೀಡಿದೆ.

Vishwa News 24

Recent Posts

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

11 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

20 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

28 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

49 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago