ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ: ಯೋಗಿ ಆದಿತ್ಯನಾಥ್‌ -Vishwanews24

ಅಯೋಧ್ಯೆ: ಸಿಎಂ ಆಗಿ ನಾನು ತಾರತಮ್ಯ ಮಾಡಲ್ಲ, ಹಿಂದೂವಾಗಿ ಅಯೋಧ್ಯೆಯ ಮಸೀದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಖಡಕ್‌ ಆಗಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನಡೆದಿದ್ದು, ಇದನ್ನ ಸುಸೂತ್ರವಾಗಿ ನಡೆಸುವಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಪಾತ್ರ ಕೂಡ ಬಹುಮುಖ್ಯವಾಗಿದೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೊತೆಗಿದ್ದ ಸಿಎಂ ಯೋಗಿ ಆದಿತ್ಯನಾಥ್‌, ಸಂಪೂರ್ಣ ಧಾರ್ಮಿಕ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಈ ಹಿನ್ನೆಲೆ ಈ ರೀತಿಯ ಮಸೀದಿ ಕಾರ್ಯಕ್ರಮ ಅಯೋಧ್ಯೆಯಲ್ಲಿ ಮುಸ್ಲಿಂ ಸಮುದಾಯದವರು ನಡೆಸಿದರೆ ತಾವು ಪಾಲ್ಗೊಳ್ಳುತ್ತೀರಾ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

“ಮಸೀದಿಯ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ನನ್ನನ್ನ ಆಹ್ವಾನಿಸುತ್ತಾರೆ ಎಂದು ನಿಮಗೆ ಅನಿಸುತ್ತಿದೆಯಾ? ಎಂದು ಪ್ರಶ್ನಿಸಿದ ಸಿಎಂ ಯೋಗಿ, ನನ್ನನ್ನ ಆಹ್ವಾನಿಸುವ ಬಗ್ಗೆ ನನಗೆ ಸಮಸ್ಯೆಯಾಗುವುದಕ್ಕಿಂತ ಜಾಸ್ತಿ ಅವರಿಗೆ ಸಮಸ್ಯೆಯಾಗುತ್ತಿರಬಹುದು ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

“ಒಬ್ಬ ಮುಖ್ಯಮಂತ್ರಿಯಾಗಿ ನಾನು ಜಾತಿ, ಧರ್ಮದ ಬಗ್ಗೆ ತಾರತಮ್ಯ ಮಾಡುವಂತಿಲ್ಲ. ಆದರೆ ಒಬ್ಬ ಯೋಗಿ ಹಾಗೂ ಹಿಂದೂವಾಗಿ ನಾನು ಅಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಯಾಕೆಂದರೆ ಅದು ನನ್ನ ಧರ್ಮವನ್ನ ಪಾಲಿಸುವ ನನ್ನ ಹಕ್ಕು ಆಗಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಮುಸ್ಲಿಂ ಸಮುದಾಯದಿಂದ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಇಕ್ಬಾಲ್‌ ಅನ್ಸಾರಿ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್‌, “ಇಕ್ಬಾಲ್‌ ಅನ್ಸಾರಿ ಸುಪ್ರೀಂಕೋರ್ಟ್‌ನ ತೀರ್ಪನ್ನ ಸ್ವಾಗತಿಸಿದಕ್ಕೆ ಧನ್ಯವಾದಗಳು. ಅವರಿಂದ ಇತರರು ಪಾಲಿಸುವ ವಿಚಾರ ಅನೇಕವಿದೆ. ರಾಮಜನ್ಮ ಸ್ಥಳ ಪ್ರಕರಣದ ಸಂಬಂಧ ಕೋರ್ಟ್‌ ಮೆಟ್ಟಿಲೇರಿ ಹೋರಾಟ ನಡೆಸಿದ್ದರು ಅವರಿಗೆ ಅಯೋಧ್ಯೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ.

ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತಿಬಿಂಬವಾಗಿದೆ” ಎಂದು ಹೇಳಿದ ಯೋಗಿ, ಎಲ್ಲಾದರೂ ಹಿಂದೂ ವ್ಯಕ್ತಿಯೊಬ್ಬ ಪಾಕಿಸ್ತಾನ ಅಥವಾ ಅಫಘಾನಿಸ್ತಾನದಲ್ಲಿ ದೇವಾಲಯ ಸಂಬಂಧ ಹೋರಾಟ ನಡೆಸಿದ್ದರೆ ಸುರಕ್ಷಿತವಾಗಿರುತ್ತಿದ್ದನಾ? ಎಂದು ಅವರು ಪ್ರಶ್ನಿಸಿದ್ದಾರೆ.

Vishwa News 24

Recent Posts

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

2 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

2 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

2 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

2 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

2 hours ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

4 hours ago