ಸಿಎಂ ಇದ್ದ ಬಸ್ಸನ್ನು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು – Vishwanews24

Featured, ರಾಜ್ಯ ನ್ಯೂಸ್

ಸಿಎಂ ಇದ್ದ ಬಸ್ಸನ್ನು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಹಿನ್ನಲೆ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಹೈಟೆಕ್ ಬಸ್ಸನ್ನು ಬೆಂಗಳೂರು ನಗರದ ಹೊರವಲಯದ ಚೆಕ್ ಪೋಸ್ಟ್ ಒಂದರ ಬಳಿ ಚುನಾವಣಾಧಿಕಾರಿಗಳು ತಡೆದು ತಪಾಸಣೆ ನಡೆಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಚುನಾವಣಾಧಿಕಾರಿಗಳು ಬಸ್ಸಿನ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಲು ತೆರಳುತ್ತಿದ್ದ ವೇಳೆ ಈ ಘಡನೆ ನಡೆದಿದ್ದು, ಚುನಾವಣಾಧಿಕಾರಿಗಳ ಕರ್ತವ್ಯಕ್ಕೆ ಯಾವುದೇ ಅಡ್ಡಿಪಡಿಸದೇ ಸಿಎಂ ಸಿದ್ದರಾಮಯ್ಯ ಅವರು ಬಸ್ ಒಳಗೇ ಕುಳಿತು ಸಹಕಾರ ನೀಡಿದ್ದಾರೆ.

ಕಾಂಗ್ರೆಸ್ ಸರಕಾರ ಬಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ಹಲ್ಲೆ , ಭಯೋತ್ಪಾದನಾ ಚಟುವಟಿಕೆ ಹೆಚ್ಚಾಗಿದೆ : ಆರ್.ಅಶೋಕ್  – Vishwanews24

ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕಾಗಿಯೇ ಈ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದ್ದು, ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್‍ ನಲ್ಲಿ ಪ್ರಯಾಣಿಸುತ್ತಾರೆ.

Leave a Reply