Featured

ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್ – vishwanews24

ಸಿಎಂ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ : ಯತ್ನಾಳ್

ವಿಜಯಪುರ: ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ ನಾಯಕರಿಗೆ ಡಿಕೆಶಿ ಕ್ಲಾಸ್ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿ ಎದುರೇ ಜನ ನನ್ನ ಪರವಾಗಿ ಕೂಗೂ ಹಾಕಿದರೆ ಜಿಲ್ಲೆಯ ನಾಯಕರು ಏನ್ ಮಾಡಬೇಕು. ಸಿಎಂ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ಜನರು ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿರುವ ಅಭಿಮಾನ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ. ನಮ್ಮನ್ನ, ಪ್ರತಾಪ್ ಸಿಂಹ ಅವರನ್ನು ಬಿಟ್ಟರೆ ಹುಷಾರ್ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಕಾರ್ಯಕ್ರಮದಲ್ಲಿ ಹೊಗಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಅಲ್ಲ, ಅವರು ರಾಜ್ಯದ ಸಿಎಂ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ. ಇದಕ್ಕೆ ಕೆಲವರಿಗೆ ನೋವಾದ್ರೆ ನಾನೇನು ಮಾಡೋಕಾಗಲ್ಲ. ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್‌ನವರು ಸಹ ಪ್ರಧಾನಿಗೆ ಗೌರವ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ರಾಜಾಧ್ಯಕ್ಷ ವಿಳಂಬ ವಿಚಾರವಾಗಿ ಮಾತನಾಡಿ, ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ಯಾರಿಗೆ ಯಾವಾಗ ಏನು ಕೊಡಬೇಕು ಎಂದು ಗೊತ್ತಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

13 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago