ಸಿಎಂ ಕಾರು ತಡೆದು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು -Vishwanews24

Featured, ರಾಜ್ಯ ನ್ಯೂಸ್

ಹಾಸನ,: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

 

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಚೆನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ನಡೆಸಿದ್ದಾರೆ.

ನಂತರ ಚನ್ನರಾಯಪಟ್ಟಣ ಮಾರ್ಗವಾಗಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವ ಸಂದರ್ಭ, ಹಾಸನ ಗಡಿಭಾಗದಲ್ಲಿರುವ ಹಿರಿಸಾವೆಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಕುಮಾರಸ್ವಾಮಿ ಅವರ ವಾಹನವನ್ನು ತಡೆದು ನಿಲ್ಲಿಸಿದರು. ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ವಾಹನವನ್ನು ಕೂಲಂಕುಷವಾಗಿ ತಪಾಸಣೆ ನಡೆಸಿದರು. ಚುನಾವಣಾಧಿಕಾರಿಗಳ ತಪಾಸಣೆ ಮುಗಿಯುವವರೆಗೆ ಸುಮ್ಮನಿದ್ದು ಸಹಕಾರ ನೀಡಿದ ಮುಖ್ಯಮಂತ್ರಿ ಬಳಿಕ ಶಿವಮೊಗ್ಗದ ಕಡೆ ಪ್ರಯಾಣ ಬೆಳೆಸಿದರು.