Featured

ಸಿಎಂ ಗೃಹ ಕಚೇರಿಗೆ ಮುತ್ತಿಗೆ ಯತ್ನ : ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ  – Vishwanews24

ಸಿಎಂ ಗೃಹ ಕಚೇರಿಗೆ ಮುತ್ತಿಗೆ ಯತ್ನ : ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ ..

ಈಶ್ವರಪ್ಪ ‌ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ..

ಮುಂದಿನ ಐದು ದಿನಗಳ‌ ಕಾಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ..

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ..

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ರೇಸ್ ಕೋರ್ಸ್ ರಸ್ತೆಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ನಾಯಕರನ್ನು ಆನಂದ ರಾವ್ ವೃತ್ತದ ಬಳಿ ಪೊಲೀಸರು ತಡೆದರು. ಆದರೆ ಬ್ಯಾರಿಕೇಡ್ ಹಾರಿ ಮುಂದೆ ಹೋಗಲು ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸಿದರು. ಖುದ್ದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಬ್ಯಾರಿಕೇಡ್ ಮೇಲೆ ಕೆಲ ಹೊತ್ತು ನಿಂತು ಹಂಗಾಮ ಸೃಷ್ಟಿಸಿದರು. ಹೀಗಾಗಿ ಅಂತಿಮವಾಗಿ ಪೊಲೀಸರು ಎಲ್ಲ ನಾಯಕರು ಹಾಗೂ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.

ಇದಕ್ಕೂ‌ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಬಂಧನ ಮಾಡುವವರೆಗೂ ನಮ್ಮ ಹೋರಾಟ ಇರುತ್ತದೆ. ಮುಂದಿನ ಐದು ದಿನಗಳ‌ ಕಾಲ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಈಶ್ವರಪ್ಪ ‌ರಾಜೀನಾಮೆ ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

9 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

9 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

9 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

12 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

13 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

13 hours ago