Featured

ಸಿಎಂ ಗ್ರಾಮ ವಾಸ್ತವ್ಯ : ‘ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಬೇಕು : ಪ್ರಿಯಾಂಕ್ ಖರ್ಗೆ -Vishwanews24

ಬೆಂಗಳೂರು,  : ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ‘ದೇಶಕ್ಕೇ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗ್ರಾಮ ವಾಸ್ತವ್ಯದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು, ‘ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಮೂಲಕ ಈಗಾಗಲೇ ಜನಪ್ರಿಯರಾಗಿದ್ದಾರೆ. ಹೈದರಾಬಾದ್ ಕರ್ನಾಟಕ ಮೂಲಕ ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಿರುವುದು ಸ್ವಾಗತಾರ್ಹ’ ಎಂದರು.

‘ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಏರ್ಪಡಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುವ ಗ್ರಾಮದ ಜೊತೆಗೆ ಸುತ್ತಮುತ್ತಲಿನ ಗ್ರಾಮಗಳ ಶಾಲೆಗಳಿಗೂ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಚಿವರು ಸಲಹೆ ನೀಡಿದರು.

ಸಭೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಪಶುಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಪಾಲ್ಗೊಂಡಿದ್ದರು. ಗ್ರಾಮ ವಾಸ್ತವ್ಯ ಒಂದು ವಿನೂತನವಾದ ಕಾರ್ಯಕ್ರಮ. ಜನರೊಂದಿಗೆ ನೇರ ಸಂಪರ್ಕಕ್ಕೆ ಇದು ಸಹಾಯಕ. ಈ ಹಿಂದೆ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಹಲವು ಯೋಜನೆಗಳು ರೂಪುಗೊಂಡಿದ್ದವು. ಜನರ ಆಶೋತ್ತರಗಳನ್ನು ಈಡೇರಿಸಲು ಜಿಲ್ಲಾಡಳಿತ ಸಜ್ಜಾಗಬೇಕು ಎಂದು ಸಚಿವರು ಹೇಳಿದರು.

ಎರಡನೇ ಹಂತದ ದಿನಾಂಕ ಬದಲುಕೊಂಡ ಮುಖ್ಯಮಂತ್ರಿಗಳು, ‘ಆ ಸಂದರ್ಭದಲ್ಲಿ ಅನುಷ್ಠಾನಗೊಂಡ ಹಲವು ಯೋಜನೆಗಳನ್ನು ಸಭೆಯ ಗಮನಕ್ಕೆ ತಂದರು. ಸುವರ್ಣ ಗ್ರಾಮ ಯೋಜನೆ ಅತ್ಯಂತ ನಿರೀಕ್ಷಿತ ಯೋಜನೆಯಾಗಿ ರೂಪುಗೊಂಡಿತ್ತು. ಆದರೆ ನನ್ನ ಅವಧಿಯ ನಂತರ ನನ್ನ ಆಶಯಕ್ಕೆ ಅನುಗುಣವಾಗಿ ಸುವರ್ಣ ಗ್ರಾಮ ಯೋಜನೆ ರೂಪುಗೊಳ್ಳಲಿಲ್ಲ. ಅದಕ್ಕೆ ಮತ್ತೆ ಆ ಯೋಜನೆಗೆ ಜೀವ ಕೊಡಲು ಅಧಿಕಾರಿಗಳು ಸಜ್ಜಾಗಬೇಕು’ ಎಂದು ಸಲಹೆ ಕೊಟ್ಟರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago