Featured

ಸಿಎಂ, ಡಿಸಿಎಂ ಹುದ್ದೆ ವಿಚಾರ ಬಹಿರಂಗ ಚರ್ಚಿಸುವಂತಿಲ್ಲ: ಡಿ.ಕೆ.ಶಿ ಎಚ್ಚರಿಕೆ – vishwanews24

ಸಿಎಂ, ಡಿಸಿಎಂ ಹುದ್ದೆ ವಿಚಾರ ಬಹಿರಂಗ ಚರ್ಚಿಸುವಂತಿಲ್ಲ: ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು,: ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಸಿಎಂ ಬದಲಾವಣೆ ಬಗ್ಗೆ ಶನಿವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟ ಪಟ್ಟಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇಂದು ಇವರುಗಳು ಸುಖಾಸುಮ್ಮನೆ ಮಾತನಾಡುವ ಅವಶ್ಯಕತೆಯಿಲ್ಲ” ಎಂದರು.

“ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು, ಸಿದ್ದರಾಮಯ್ಯ ಅವರು ಪಕ್ಷದ ಹಿತ ದೃಷ್ಟಿಯಿಂದ ಹೇಗೆ ಕೆಲಸ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನಕ್ಕೆ ಬಂದಿದ್ದೇವೆ. ಈ ವಿಚಾರವಾಗಿ ಯಾವುದೇ ಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಮಾತನಾಡುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago