ರಾಜ್ಯ ನ್ಯೂಸ್

ಸಿಎಂ ತವರು ಕ್ಷೇತ್ರದಲ್ಲಿ ಬಿಎಸ್‌ವೈ ಪುತ್ರನ ಸಂಚಾರ

ಮೈಸೂರು: ಕಾರ್ಯಕರ್ತರ ಅಪೇಕ್ಷೆಯಂತೆ, ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಅವಕಾಶ ನೀಡಿದರೆ ವರುಣಾ ಕ್ಷೇತ್ರವನ್ನು ಪ್ರತಿನಿಧಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆಂಬ ಚರ್ಚೆ ಆರಂಭವಾಗಿರುವ ಬೆನ್ನಲ್ಲೆ ಸೋಮವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಟಿಕೆಟ್‌ ಆಕಾಂಕ್ಷಿಗಳು ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರನ್ನು ಎದುರಿಸಲು ಸಮರ್ಥ ಅಭ್ಯರ್ಥಿ ಬೇಕೆಂಬ ಕಾರಣಕ್ಕೆ ತಮ್ಮನ್ನು ಅಭ್ಯರ್ಥಿಯಾಗಿ ಮಾಡಬೇಕೆಂದು ರಾಷ್ಟ್ರೀಯ, ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿ, ಕ್ಷೇತ್ರದ ಪದಾಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದರು.

ಸುತ್ತೂರು ಮಠಕ್ಕೆ ಭೇಟಿ:  ಮಲೆ ಮಹದೇಶ್ವರನ ಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೈಸೂರಿಗೆ ಆಗಮಿಸಿದ ವಿಜಯೇಂದ್ರ, ಮಧ್ಯಾಹ್ನ 12.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಆಗಮಿಸಿ  ಪೂಜೆ ಸಲ್ಲಿಸಿದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುತ್ತೂರು ಮಠಕ್ಕೆ ತೆರಳಿ ಶ್ರೀಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.  2 ಗಂಟೆ ಹೊತ್ತಿಗೆ
ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್‌ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಸಂಜೆ ವೇಳೆಗೆ ವರುಣಾ ಕ್ಷೇತ್ರಕ್ಕೆ ತೆರಳಿ, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

ತಂದೆ ಹಾಗೂ ಅಣ್ಣನಂತೆ ಸಕ್ರಿಯ ರಾಜಕಾರಣದಲ್ಲಿ ಕಾಣಿಸಿಕೊಳ್ಳದಿದ್ದರೂ, ಕಳೆದ 10 ವರ್ಷಗಳಿಂದ ತಂದೆಯವರೊಂದಿಗೆ ಬೆರೆತು ರಾಜಕೀಯವನ್ನು ನೋಡಿದ್ದೇನೆ. ಹೀಗಾಗಿ ಚುನಾವಣಾ ರಾಜಕಾರಣ ನನಗೆ ಹೊಸದೆಂದು ಅನಿಸುವುದಿಲ್ಲ.
– ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಪುತ್ರ

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

5 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

5 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

5 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

6 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

6 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

6 hours ago