ಕಾಪು : ಉಡುಪಿ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನಗರದ ಸಾಯಿರಾಧಾ ರೆಸಾರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ರೆಸಾರ್ಟ್ ಸುತ್ತ ಹಸಿರು ಬೇಲಿ ಹಾಕುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಪಂಚಕರ್ಮ ಪ್ರಕೃತಿ ಚಿಕಿತ್ಸೆಗಾಗಿ ಹೆಚ್.ಡಿ ಕುಮಾರಸ್ವಾಮಿ 5 ದಿನಗಳ ಕಾಲ ಉಳಿದುಕೊಂಡು ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ. ಹಾಗೇ ದೇವೇಗೌಡರಿಗೆ ಒಂದು ವಾರದ ಕೋರ್ಸ್ ನಿಗದಿಯಾಗಿದೆ. ಸದ್ಯ ರಿಲ್ಯಾಕ್ಸ್ ಮೂಡ್ನಲ್ಲಿರುವ ಸಿಎಂ ಕುಮಾರಸ್ವಾಮಿ, ರೆಸಾರ್ಟ್ ಸುತ್ತಮುತ್ತ ಮಾಧ್ಯಮಗಳನ್ನು ಬಿಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರೆಸಾರ್ಟ್ ಆಸುಪಾಸು ಮಾಧ್ಯಮಗಳಿಗೆ ಚಿತ್ರೀಕರಣವನ್ನೂ ನಿರ್ಬಂಧಿಸಲಾಗಿದೆ. ಇದಲ್ಲದೆ ಯಾರ ಕಣ್ಣಿಗೂ ಬೀಳಬಾರದೆಂದು ರೆಸಾರ್ಟ್ ಸುತ್ತ ಹಸಿರು ಬೇಲಿ ಹಾಕುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ
ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆಂದು ಸತತವಾಗಿ ಓಡಾಟ ನಡೆಸಿದ್ದ ಸಿಎಂ ಮತ್ತು ಸಚಿವರು ಇದೀಗ ವಿಶ್ರಾಂತಿ ಮೂಡ್ನಲ್ಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೂ ಮಗನೊಂದಿಗೆ ರೆಸಾರ್ಟ್ ಸೇರಿಕೊಂಡಿದ್ದು, ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ತನ್ಮಯ್ ಗೋಸ್ವಾಮಿ ನೇತೃತ್ವದ 40 ಜನರ ತಂಡ ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿಗೆ ಪ್ರಕೃತಿ ಚಿಕಿತ್ಸೆ, ಆಯುರ್ವೇದ ಪದ್ಧತಿಯ ಚಿಕಿತ್ಸೆ, ಮಸಾಜ್ ಸಹಿತ ಪಂಚಕರ್ಮ ಚಿಕಿತ್ಸೆ ನೀಡುತ್ತಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಮೇ 3ರವರೆಗೆ ಇಲ್ಲಿ ಚಿಕಿತ್ಸೆ ಪಡೆಯಲಿದ್ದು, ದೇವೇಗೌಡರು ಇನ್ನೂ 1 ವಾರ ಇಲ್ಲೇ ತಂಗಲಿದ್ದಾರೆ ಎಂಬ ಮಾಹಿತಿ ದೊರಕಿದೆ. ಅಲ್ಲಿಯವರೆಗೆ ಈ ರೆಸಾರ್ಟ್ಗೆ ಸಾರ್ವಜನಿಕರ ಮತ್ತು ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ರೆಸಾರ್ಟ್ ಆವರಣ ಯಾರಿಗೂ ಕಾಣದಂತೆ ಸುತ್ತಲೂ ಹಸಿರು ಪರದೆ ಬೇಲಿ ಹಾಕುವಂತೆ ರೆಸಾರ್ಟ್ ಸಿಬ್ಬಂದಿಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…