ಮೈಸೂರು: ಹೊಗಳು ಭಟ್ಟರು ಬಹುಪರಾಕ್ ಹಾಕುವವರನ್ನು ಇಟ್ಟುಕೊಂಡ ಪರಿಣಾಮ ಸಿಎಂ ಸಿದ್ದರಾಮಯ್ಯನವರಿಗೆ ಈ ಸ್ಥಿತಿ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಿದ್ದರಾಮಯ್ಯನವರ ಪತ್ನಿ 14 ಸೈಟ್ ಅನ್ನು ಮರಳಿ ಮುಡಾಕ್ಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ ಅಲ್ವಾ? ಎಂದು ಪ್ರಶ್ನಿಸಿದರು.
ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ ಎಂದರು.
ಸಿಎಂ ತಮ್ಮ ಸೈಟ್‌ಗೆ 64 ಕೋಟಿ ರೂ. ಕೇಳಿದ ದಿನವೇ ಸಿಎಂ ಮೇಲಿನ ಗೌರವ, ವಿಶ್ವಾಸ ನೆಲ ಕಚ್ಚಿತು. ಈಗ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಅಷ್ಟೇ. ಕೊಡದಿದ್ದರೂ ಅಷ್ಟೇ. ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.
ವರುಣಾ ಚುನಾವಣೆ ಸಂದರ್ಭದಲ್ಲೇ ನನಗೆ ಈ ಸೈಟ್ ದಾಖಲಾತಿ ಬಂದಿತ್ತು. ಪತ್ನಿ ಹೆಸರಿದೆ ವೈಯಕ್ತಿಕ ದಾಳಿ ಬೇಡ ಎಂದು ಸುಮ್ಮನಿದ್ದೆ. ರಾಜಕಾರಣಿಗಳೇ ನಿಮ್ಮ ಹೆಂಡತಿ, ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಈ ಹಿಂದೆ ಸಿಎಂಗಳಾಗಿ ಜೈಲಿಗೆ ಹೋಗಿದ್ದು ಅವರ ಕುಟುಂಬದ, ಮಕ್ಕಳ ಕಾರಣಕ್ಕಾಗಿ ಎಂಬುದು ನೆನಪಿರಲಿ ಎಂದರು.
ಈಗ ಸಿಎಂ ಪತ್ನಿಯ ಭಾವನಾತ್ಮಕ ಕಾರ್ಡ್ ಕೆಲಸ ಮಾಡುವುದಿಲ್ಲ. ಪಾರ್ವತಮ್ಮ ಅವರಿಗೆ ತಮ್ಮ ಪತಿಯ ತಪಸ್ಸಿನ ರೀತಿಯ ರಾಜಕಾರಣಕ್ಕಿಂತಾ ಸೈಟ್ ಮುಖ್ಯವಾಗಿ ಇಷ್ಟು ದಿನ ಹಠ ಹಿಡಿದು ಕೂತಿದ್ದೆ ಬಹುದೊಡ್ಡ ತಪ್ಪು. ಈಗ ಸೈಟ್ ವಾಪಸ್ ಕೊಡುವುದಾಗಿದ್ದರೆ ಹೈಕೋರ್ಟ್‌ನಲ್ಲಿ ಹೋರಾಟ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…