ತುಮಕೂರು : ಬಿಟ್ ಕಾಯಿನ್ ಹಗರಣವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲಿ ಪಡೆಯಲಿದೆ. ಈ ಬಾರಿ ಕೂಡ ಬಿಜೆಪಿ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯಾಗಲಿದ್ದಾರೆ. ಬೊಮ್ಮಾಯಿ ತಲೆದಂಡವಾಗಲಿದೆ ಎಂಬ ವದಂತಿಯನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ. ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ, ಹೈಕಮಾಂಡ್ ಹಾಗೂ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ. ಇನ್ನು ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೂ ಬಂದಿದ್ದು, ಖಂಡಿತವಾಗಿಯೂ ಇದು ಪ್ರಮುಖವಾದ ವಿಚಾರವಾಗಿದೆ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೋ ಅವರ ವಿರುದ್ಧ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ, ಬಿಜೆಪಿ ಅಧ್ಯಕ್ಷರ ಬದಲಾವಣೆಯ ಯಾವುದೇ ಪ್ರಸ್ತಾಪ ಇಲ್ಲಎಂದು ಸ್ಪಷ್ಟವಾಗಿ ಇದೇ ವೇಳೇ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…