ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವನಾತ್ಮಕ ಭಾಷಣದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ , ” ಎಂ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಾದ ಹಿನ್ನೆಲೆಯಲ್ಲಿ ಭಾವುಕರಾಗಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ, ಸ್ಪಷ್ಟವಾಗಿ ಹೇಳಬೇಕೆಂದರೆ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ” ಎಂದು ಹೇಳಿದರು.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಯಾವುದೇ ಗೊಂದಲಕ್ಕೆ ಎಡೆಯಿಲ್ಲ ಸಿಎಂ ವೈಯಕ್ತಿಕ ಭಾವನಾತ್ಮಕ ಹೇಳಿಕೆ ಇದು. ಇಡೀ ಸರ್ಕಾರ ಒಂದಾಗಿ ಕೆಲಸ ಮಾಡುತ್ತೆ.ರಾಜ್ಯದ ಬೆಳವಣಿಗೆಗೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ.ಯಾರು ಯಾರು ಏನೇನು ಹೇಳಿದ್ದಾರೋ ಅವರವರಿಗೆ ಬಿಟ್ಟಿದ್ದು” ಎಂದರು.
“ಬೆಳಗಾವಿಯಲ್ಲಿ ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಭಾಷೆಯ ಹೆಸರಿನಲ್ಲಿ ಗೂಂಡಾಗಿರಿ ಮಾಡುವುದು ಸರಿಯಲ್ಲ. ಈ ವಿಚಾರವಾಗಿ ಯಾವುದೇ ಓಲೈಕೆ ರಾಜಕಾರಣ ಇಲ್ಲ. ಭಾಷೆ ಗಡಿ ಹೆಸರಿನಲ್ಲಿ ಪುಂಡಾಟಿಕೆಯನ್ನು ಸ್ಪಷ್ಟವಾಗಿ ಕಾನೂನು ಚೌಕಟ್ಟಿನಲ್ಲಿ ನಿಯಂತ್ರಣ ಮಾಡಲು ಸರ್ಕಾರ ಸಜ್ಜಾಗಿದೆ” ಎಂದು ಎಚ್ಚರಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…