Featured

ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ -Vishwanews24

ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ: ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ -Vishwanews24

ಉಡುಪಿ: ಬಿಜೆಪಿ ನೇತೃತ್ವದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿ.ಸುನೀಲ್ ಕುಮಾರ್ ಇವರಿಗೆ ಸಚಿವ ಸ್ಥಾನ ದೊರೆತಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಕಛೇರಿಯ ಬಳಿ ಸಂಭ್ರಮಾಚರಣೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಮಾತನಾಡಿ ಈ ಬಾರಿಯ ರಾಜ್ಯ ಮಂತ್ರಿ ಮಂಡಲದಲ್ಲಿ ಉಡುಪಿ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ದೊರೆತಿದ್ದು ಸರಳ ಸಜ್ಜನಿಕೆಯ ಅನುಭವಿ ರಾಜಕಾರಿಣಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಘಟನಾ ಚತುರ ವಿ.ಸುನೀಲ್ ಕುಮಾರ್ ಇವರಿಬ್ಬರು ಸಚಿವರಾಗಿ ಆಯ್ಕೆಯಾಗಿರುವುದು ಜಿಲ್ಲೆಯ ಸಮಸ್ತ ಕಾರ್ಯಕರ್ತರಿಗೆ ಸಂದ ಗೌರವ. ಈ ಆಯ್ಕೆಗೆ ಸಹಕರಿಸಿದ ಎಲ್ಲ ಹಿರಿಯರೂ ಅಭಿನಂದನಾರ್ಹರು ಎಂದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು ಮಾತನಾಡಿ, ವಹಿಸಿರುವ ಖಾತೆಯನ್ನು ಸಮರ್ಪಕವಾಗಿ ನಿಭಾಯಿಸಿ ಅನುಭವವನ್ನು ಮೇಳೈಸಿರುವ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಮೂರನೇ ಬಾರಿಗೆ ಹಾಗೂ ಸಂಘಟನೆ ಮೂಲಕ ಅಭಿವೃದ್ಧಿಯ ಹೊಸ ಶಕೆಗೆ ಮುನ್ನುಡಿ ಬರೆದು ಸರಕಾರದ ಮುಖ್ಯ ಸಚೇತಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ರವರು ಮೊದಲನೇ ಬಾರಿಗೆ ರಾಜ್ಯ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ. ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆಯಾಗಿ ಶೋಭಾ ಕರಂದ್ಲಾಜೆ ಆಯ್ಕೆ ಸಹಿತ ರಾಜ್ಯದಲ್ಲಿ ಈ ಬೆಳವಣಿಗೆ, ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಿ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ವಿಜಯ ಪತಾಕೆಯನ್ನು ಉತ್ತುಂಗಕ್ಕೇರಿಸಲು ನಾಂದಿ ಹಾಡಿದೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 hour ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago