ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು.
ಕೆಎಂಎಫ್ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. .
ಘ್ರದಲ್ಲೇ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು ಎಂದು ಇತ್ತೀಚೆಗಷ್ಟೇ ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು.
ಅದರಂತೆಯೇ ನಿನ್ನೆ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಮಹಾಮಂಡಳಿ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು.
ಪ್ರತಿ ಲೀಟರ್ ಹಾಲಿನ ಬೆಲೆ 3 ರೂಪಾಯಿ ಹೆಚ್ಚಳ ಮಾಡಲಾಗುತ್ತಿದೆ. ಇದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದರೂ, ಹೈನುಗಾರರಿಗೆ ವರದಾನವಾಗಲಿದೆ.
ಹಾಲಿನ ದರ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ಹೈನುಗಾರರು ಅಥವಾ ರೈತರಿಗೆ ಸಂದಾಯವಾಗಲಿದೆ.ಅಂದರೆ ಹೆಚ್ಚಳ ಮಾಡಲಾದ ದರವನ್ನು ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್ ಹೇಳಿಕೆ ನೀಡಿತ್ತು.
ಆದ್ರೆ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಈ ನಿರ್ಧಾರ ಕೈಗೊಂಡಿದ್ದರಿಂದ ಸಿಎಂ ತಡೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ಆರ್. ಮುರಳಿಕೃಷ್ಣ ನಿಧನ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…