Featured

ಸಿಎಂ ಮತ್ತು ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿ.ಕೆ.ಶಿವಕುಮಾರ್ – vishwanews24

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ದಿಲ್ಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂದು ಕೇಳಿದಾಗ ಈ ರೀತಿ ಉತ್ತರಿಸಿದರು.

“ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದಿಲ್ಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

10 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

10 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

11 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

12 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

12 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

13 hours ago