ದಾವಣಗೆರೆ: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂಬ ವದಂತಿಯ ನಡುವೆ ಕಾಂಗ್ರೆಸ್ ನ ಹಿರಿಯ ಶಾಸಕರೂ ಆದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪರ ಪರ ಬ್ಯಾಟ್ ಬೀಸಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಖಿಲ ಭಾರತ ವೀರಶೈವ ಮಹಾಸಭಾ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಭಾದಿಂದ ನಾವು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ, ಮತ್ತೇನೂ ಎಂದು ತಿಳಿಸಿದರು.
ಮಠಾಧೀಶರು ಯಡಿಯೂರಪ್ಪ ಅವರ ಪರ ಬ್ಯಾಟ್ ಬೀಸುತ್ತಿರುವ ಕುರಿತಂತೆ ಅವ್ರು ದೊಡ್ಡವರು. ಅವ್ರ ಬಗ್ಗೆ ಮಾತನಾಡಲ್ಲ. ವೀರಶೈವ ಮಹಾಸಭಾದಿಂದ ನಾನು ಮಾತನಾಡುತ್ತೇನೆ ಎಂದ ಅವರು ದಾವಣಗೆರೆಯಲ್ಲಿ ಕೊರೊನಾ ನಿಯಂತ್ರಣ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ನಾವು ಲಸಿಕೆಯನ್ನು ನಮ್ಮ ದುಡ್ಡಿನಿಂದ ನೀಡುತ್ತಿದ್ದೇನೆ. ಸರ್ಕಾರದಿಂದ ಹಣ ಏನೂ ಕೊಟ್ಟಿಲ್ಲ. ಜನರು ಸಾಯಬಾರದು ಎಂಬ ಕಾರಣಕ್ಕೆ ಈ ಕಾರ್ಯ ಮಾಡುತ್ತಿದ್ದೇವೆ. ಲಸಿಕೆ ನೀಡಿಕೆಯೂ ಚೆನ್ನಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…