ಉಡುಪಿ: ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್‍ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಸಾಧಿಸಬೇಕು ಎಂದು ತಿಳಿಸಿದರು.
ಇತರೆ ಮಿತ್ರ ಪಕ್ಷಗಳ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು. ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಮಾಡಬೇಕು. ಚಂದ್ರಬಾಬು ನಾಯ್ಡು ಅವರ ವಿರೋಧ ಕಟ್ಟಿಕೊಂಡರೆ ಬಿಜೆಪಿಗೆ ನಷ್ಟವಾಗಲಿದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ವಾಜಪೇಯಿಯ ನೀತಿಯನ್ನು ಪ್ರಧಾನಿ ಮೋದಿ ಅನುಸರಿಸಬೇಕು ಎಂದರು.
ಪ್ರಧಾನಿ ಮೋದಿ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲ್ಲಿ ಇಲ್ಲ. ಜನರು ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ ಎಂದು ಹೇಳಿದ ಅವರು, ನೋಟು ನಿಷೇಧದ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ ಎಂದು ಅಭಿಪ್ರಾಯ ಪಟ್ಟರು.
ಇನ್ನು ಯೋಗಿ ಆದಿತ್ಯನಾಥ್ ಮುಂದಿನ ಪ್ರಧಾನಿ ಅಭ್ಯರ್ಥಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಅಭ್ಯರ್ಥಿ ಆಗಬಾರದು ,.ದೇಶಕ್ಕೆ ಮೋದಿಯೇ ಮುಂದಿನ ಪ್ರಧಾನಿಯಾಗಬೇಕು. ಸಿಎಂ ಯೋಗಿ ಮೋದಿಯಷ್ಟು ಸಮರ್ಥರಲ್ಲ. ಆದಿತ್ಯನಾಥ್ ಅವರು ರಾಜಕಾರಣಿಯಲ್ಲ ಅವರು ಸಂತರು. ಸಂತ ಪರಂಪರೆಯ ವ್ಯಕ್ತಿ. ಉತ್ತರ ಪ್ರದೇಶದಲ್ಲಿ ಇಷ್ಟು ಕೆಲಸಗಳನ್ನು ಮಾಡಿರುವುದೇ ವಿಶೇಷ. ಆದರೆ ಅವರು ಈಗ ಪ್ರಧಾನಿ ಅಭ್ಯರ್ಥಿ ಆಗಬಾರದು ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…