ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ ಮತ್ತು ಡಿ.ಎನ್ ಜೀವರಾಜ್ ನೇಮಕ -Vishwanews24

Featured, ರಾಜ್ಯ ನ್ಯೂಸ್

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ ಮತ್ತು ಡಿ.ಎನ್ ಜೀವರಾಜ್ ನೇಮಕ -Vishwanews24

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರನ್ನು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿಯೂ ಮುಂದುವರಿಸಲಾಗಿದ್ದು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ.

ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ : ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ : ನಳಿನ್ ಕುಮಾರ್ ಕಟೀಲ್ – Vishwanews24