ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆ ಹದ್ದು ಮೀರದಂತೆ ತಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.
ಪೊಲೀಸರ ಕಣ್ಣು ತಪ್ಪಿಸಿ ಬೀಗ ಹಾಕಲು ಅರವಿಂದ್ ಬೆಲ್ಲದ್ ಯತ್ನಿಸಿದರು. ಪೊಲೀಸರ ಕಣ್ತಪ್ಪಿಸಿ ದ್ವಾರಕ್ಕೆ ಬೀಗ ಹಾಕಲು ಕಸರತ್ತು ನಡೆಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮೆಗಾ ಡ್ರಾಮಾವೇ ನಡೆಯಿತು. ಆಗ ಪೊಲೀಸರೇ ಬಾಗಿಲು ಮುಚ್ಚಿ ಬೆಲ್ಲದ್ ಅವರನ್ನು ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ಬಸ್‌ನಲ್ಲಿ ತುಂಬಿಕೊಂಡು ಪೊಲೀಸರು ಹೊರಟರು.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ ಕಾರಜೋಳ, ಛಲವಾದಿ ನಾರಾಯಣಸ್ವಾಮಿ, ಸುನೀಲ್ ಕುಮಾರ್, ರವಿಕುಮಾರ್, ಜಗ್ಗೇಶ್, ಬೆಲ್ಲದ್, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಹರೀಶ್ ಪೂಂಜಾ, ಗೋಪಾಲಯ್ಯ, ಮಹೇಶ್ ತೆಂಗಿನಕಾಯಿ, ಬಿ ಪಿ ಹರೀಶ್, ಸಿ.ಪಿ.ಯೋಗೇಶ್ವರ್, ಯಶ್‌ಪಾಲ್ ಸುವರ್ಣ ಸೇರಿ ಬಿಜೆಪಿ ಜೆಡಿಎಸ್‌ನ 55 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…