Featured

ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ – vishwanews24

ಸಿಎಂ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧಕ್ಕೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಕೂಗು ಜೋರಾಗಿದೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿತ್ತು. ಪ್ರತಿಭಟನೆ ಹದ್ದು ಮೀರದಂತೆ ತಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದರು.

ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಿ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಘೋಷಣೆ ಕೂಗಿದರು. ಈ ವೇಳೆ ವಿಧಾನಸೌಧಕ್ಕೆ ಬೀಗ ಹಾಕಲು ಮುಂದಾದರು. ಆದರೆ ವಿಪಕ್ಷಗಳ ನಾಯಕರ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಸಿದರು.

ಪೊಲೀಸರ ಕಣ್ಣು ತಪ್ಪಿಸಿ ಬೀಗ ಹಾಕಲು ಅರವಿಂದ್ ಬೆಲ್ಲದ್ ಯತ್ನಿಸಿದರು. ಪೊಲೀಸರ ಕಣ್ತಪ್ಪಿಸಿ ದ್ವಾರಕ್ಕೆ ಬೀಗ ಹಾಕಲು ಕಸರತ್ತು ನಡೆಸಿದರು. ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮೆಗಾ ಡ್ರಾಮಾವೇ ನಡೆಯಿತು. ಆಗ ಪೊಲೀಸರೇ ಬಾಗಿಲು ಮುಚ್ಚಿ ಬೆಲ್ಲದ್ ಅವರನ್ನು ತಡೆದರು. ಕೊನೆಗೆ ಪ್ರತಿಭಟನಾಕಾರರನ್ನು ಬಸ್‌ನಲ್ಲಿ ತುಂಬಿಕೊಂಡು ಪೊಲೀಸರು ಹೊರಟರು.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಗೋವಿಂದ ಕಾರಜೋಳ, ಛಲವಾದಿ ನಾರಾಯಣಸ್ವಾಮಿ, ಸುನೀಲ್ ಕುಮಾರ್, ರವಿಕುಮಾರ್, ಜಗ್ಗೇಶ್, ಬೆಲ್ಲದ್, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಹರೀಶ್ ಪೂಂಜಾ, ಗೋಪಾಲಯ್ಯ, ಮಹೇಶ್ ತೆಂಗಿನಕಾಯಿ, ಬಿ ಪಿ ಹರೀಶ್, ಸಿ.ಪಿ.ಯೋಗೇಶ್ವರ್, ಯಶ್‌ಪಾಲ್ ಸುವರ್ಣ ಸೇರಿ ಬಿಜೆಪಿ ಜೆಡಿಎಸ್‌ನ 55 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

6 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago