Featured

ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24

ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ  ಸಿದ್ದರಾಮಯ್ಯ ಒತ್ತಾಯ -Vishwanews24

ಬೆಂಗಳೂರು : ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂಬುದಾಗಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು. ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು. ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ‌ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ‘ನಾ ಖಾವುಂಗಾ, ನಾ ಖಾನೆ ದೂಂಗಾ’ ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ಬ ‘ಮೈ ಬಿ ಖಾವೂಂಗಾ, ತುಮ್ ಬಿ ಖಾವೋ’ ಎಂದು ಬದಲಿಸಿ ಬಿಡಿ. ಆಪರೇಷನ್ ಕಮಲ‌ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ‌ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ‌ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago