Featured

ಸಿಎಂ ವಿರುದ್ಧ #MeToo ಆರೋಪ : ಎಚ್‍ಡಿಕೆ ವಿರುದ್ಧ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ ಎಚ್ಚರ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ.

ರಾಧಿಕಾ ಕುಮಾರಸ್ವಾಮಿಯವರು ತಾವು ಕುಮಾರಸ್ವಾಮಿ ಪತ್ನಿ ಎಂದು ಹೇಳಿಕೊಂಡಿದ್ದಾರೆ. ಅವರ ಮಗಳ ಜೊತೆ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಿಸಿದ, ಒಟ್ಟಿಗೆ ಇರುವ ಫೋಟೋಗಳು ಕಾಣಿಸಿಕೊಂಡಿವೆ. ಸಿಎಂ ಕುಮಾರಸ್ವಾಮಿಯವರು ಏಕೆ ಸಾಮಾಜಿಕವಾಗಿ ಎಲ್ಲರ ಮುಂದೆ ಅವರನ್ನು ಕರೆದುಕೊಂಡು ಬರುತ್ತಿಲ್ಲ, ಏಕೆ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆದುಕೊಂಡು ಹೋಗುವುದಿಲ್ಲ. ಅವರ ಕುಟುಂಬ ಸದಸ್ಯರನ್ನು ಜಿಲ್ಲಾ ಪಂಚಾಯತ್ ಸದಸ್ಯರನ್ನಾಗಿ ಮಾಡ್ತಾರೆ, ರಾಮನಗರದಲ್ಲಿ ಪಕ್ಷದಿಂದ ಟಿಕೆಟ್ ನೀಡಿ ಚುನಾವಣೆಗೆ ನಿಲ್ಲಿಸುತ್ತಾರೆ, ಹಾಗಾದರೆ ಇವರನ್ನೇಕೆ ಎಲ್ಲರ ಮುಂದೆ ಕುಟುಂಬ ಸದಸ್ಯರೆಂದು ಒಪ್ಪಿಕೊಳ್ಳುತ್ತಿಲ್ಲ ಎಂದು ಕೇಳಿದರು.

ಸೆಕ್ಷನ್ 497 ನಡಿ ವಿವಾಹಿತ ಪುರುಷ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡರೆ ಅದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ಕೊಟ್ಟಿದೆ. ಕಾನೂನಿನಲ್ಲಿಯೇ ಮಾನ್ಯತೆ ಸಿಕ್ಕಿರುವಾಗ ನಿಮಗೇಕೆ ಭಯ ಕುಮಾರಸ್ವಾಮಿಯವರೇ ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದ್ದಾರೆ.

ಹೆಸರು ರಾಧಿಕಾ ಕುಮಾರಸ್ವಾಮಿ ಅಂತ ಬಳಸಿಕೊಳ್ಳುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಕೂಡಾ ಹಾಕಿಕೊಂಡಿದ್ದಾರೆ. ಹೀಗಾಗಿ ಯಾರಿಗೆ ಶೋಷಣೆಯಾಗಿದೆಯೋ ಅವರು ದೂರು ನೀಡಿದರೆ, ನೀವೂ ಕೂಡಾ ಮೀ ಟೂ ಆರೋಪದಡಿ ಸಿಲುಕಿಕೊಳ್ಳುತ್ತೀರಿ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago