ರಾಜ್ಯ ನ್ಯೂಸ್: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.
ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.
ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…