ಬೆಂಗಳೂರು : “ಪೊಲೀಸರು ತಮ್ಮನ್ನು ತಾವು ರಕ್ಷಿಸಲು ಮಂಗಳೂರು ಗೋಲಿಬಾರ್‌ನಲ್ಲಿ ಬಲಿಯಾದವರನ್ನು ಆರೋಪಿಗಳು ಎಂದು ಹೇಳುತ್ತಿದ್ದಾರೆ” ಎಂದು ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದ್ದಾರೆ.
ಮಂಗಳವಾರ ಪರಿಷತ್ತಿನಲ್ಲಿ ಮಾತನಾಡಿದ ಅವರು, “ಮಂಗಳೂರು ಗೋಲಿಬಾರ್‌ನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಆದರೆ ಪೊಲೀಸರು ಪಾರಾಗಲು ಈ ಬಲಿಯಾದವರು ಆರೋಪಿಗಳು ಎಂದು ಪಟ್ಟ ಕಟ್ಟಲು ಮುಂದಾಗಿದ್ದರು. ಇದು ಅತ್ಯಂತ ಅಮಾನವೀಯ ಕೆಲಸ” ಎಂದರು.
“ಮುಖ್ಯಮಂತ್ರಿ, ಉಸ್ತುವಾರಿ ಸಚಿವ, ಸ್ಥಳೀಯ ಶಾಸಕ, ಸಂಸದ ಎಲ್ಲರೂ ಬಿಜೆಪಿಯವರೇ ಆಗಿದ್ದಾರೆ. ಆದರೆ ಅವರಿಗೆ ಗೋಲಿಬಾರ್‌ನಲ್ಲಿ ಮೃತಪಟ್ಟವರ ಮನೆಗೆ ಭೇಟಿ ನೀಡಲು ಈವರೆಗೂ ಸಾಧ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೆ ಮೃತರ ಕುಟುಂಬಕ್ಕೆ ಪರಿಹಾರ ಹಣದ ಚೆಕ್ ನೀಡುತ್ತೇವೆ ಎಂದು ಕರೆಸಿಕೊಂಡು ಅಮಾನವೀಯವಾಗಿ ವರ್ತಿಸಿದ್ದಾರೆ” ಎಂದು ಅವರು ಆರೋಪಿಸಿದರು.
“ನೆರೆ ರಾಜ್ಯ ಕೇರಳದಿಂದ ಬಂದವರು ಮಂಗಳೂರು ಗೋಲಿಬಾರ್‌ಗೆ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ ಈವರೆಗೂ ಕೇರಳದ ಯಾರನ್ನೂ ಬಂಧನ ಮಾಡಿಲ್ಲ. ಸಿಎಎ, ಎನ್‌ಆರ್‌ಸಿ ವಿರುದ್ಧವಾಗಿ ಮಾತನಾಡುವ ಎಲ್ಲರನ್ನೂ ದೇಶದ್ರೋಹಿಗಳು ಎಂದು ಹೇಳುವುದು ಸರಿಯಲ್ಲ” ಎಂದು ಹೇಳಿದರು.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…