ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿಷಯ ಪ್ರಸ್ತಾಪವಾದರೆ ಪ್ರತಿಭಟನೆ ಮಾಡಲು ತಯಾರಾಗಿ ಬಂದಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ ಕಾದಿತ್ತು. ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸಿಎಎ ಬಗ್ಗೆ ಒಂದು ಸಾಲು ಕೂಡಾ ಮಾತನಾಡಲಿಲ್ಲ.
ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ವಿಧಾನಸಭೆಯೊಳಗೆ ಘೋಷಣಾ ಭಿತ್ತಿ ಪತ್ರಗಳನ್ನು ಒಯ್ದಿದ್ದು ರಾಜ್ಯಪಾಲರ ಭಾಷಣ ಮುಗಿದ ಬಳಿಕ ಹೊರಬಂದ ಐವನ್, “ನಾವು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಬೇಕು ಎಂದು ಸಜ್ಜಾಗಿ ಬಂದಿದ್ದೆವು, ಆಗಲಿಲ್ಲ ಎಲ್ಲ ವೇಸ್ಟ್ ಆಯಿತು” ಎಂದು ಸುದ್ದಿಗಾರರಿಗೆ ಹೇಳಿದರು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಬೆಳಿಗ್ಗೆ 11 ಕ್ಕೆ ವಿಧಾನಸಭೆ ಮೊಗಸಾಲೆಯಿಂದ ಸಭಾಂಗಣದೊಳಗೆ ಪ್ರವೇಶಿಸಿದರು. ಅವರ ಹಿಂದೆಯೇ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಮೊಗಸಾಲೆಯೊಳಗೆ ಪ್ರವೇಶಿಸಲು ಬಂದಾಗ ಮಾರ್ಷಲ್‌ಗಳು ತಡೆದರು. ಅವರು ಸಮವಸ್ತ್ರದಲ್ಲಿ ಬಂದ ಕಾರಣಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ಆಯುಕ್ತರು ತಬ್ಬಿಬ್ಬಾದರು. ಖಾಕಿ ಸಮವಸ್ತ್ರದಲ್ಲಿ ಬರುವಂತೆ ಇಲ್ಲ ಎಂಬುದನ್ನು ಅವರಿಗೆ ತಿಳಿಸಲಾಯಿತು. ಇದಾದ ಒಂದೆರಡು ನಿಮಿಷಗಳಲ್ಲೇ ಅವರನ್ನು ಮೊಗಸಾಲೆಯೊಳಗೆ ಬಿಡಲಾಯಿತು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…