ಗುವಾಹಟಿ: 2019ರ ಡಿಸೆಂಬರ್ ನಲ್ಲಿ ನಡೆದ ಹಿಂಸಾತ್ಮಕ ಸಿಎಎ ವಿರೋಧಿ ಪ್ರತಿಭಟನೆಯ ಆರೋಪದಲ್ಲಿ ಬಂಧಿಸಲ್ಪಟ್ಟು, ಕಳೆದ 19 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದ ಅಸ್ಸಾಂ ಶಾಸಕ ಅಖಿಲ್ ಗೊಗೊಯ್ ವಿರುದ್ಧದ ಎಲ್ಲಾ ಆರೋಪಗಳಿಂದ ಎನ್ ಐಎ ಕೋರ್ಟ್ ಮುಕ್ತಗೊಳಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಸಿಎಎ ವಿರೋಧಿ ಪ್ರತಿಭಟನೆಯ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಗೊಗೊಯ್ ಅವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿತ್ತು. ಶಿವಸಾಗರ್ ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ಗೊಗೊಯ್ ಅವರನ್ನು ಗುವಾಹಟಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದಾಗಿ ವರದಿ ವಿವರಿಸಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಗೊಗೊಯ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದ ಎನ್ ಐಎ ವಿಶೇಷ ಕೋರ್ಟ್ ಗೊಗೊಯ್ ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಕೇಂದ್ರ ಕಾರಾಗೃಹಕ್ಕೆ ಆದೇಶವನ್ನು ಕಳುಹಿಸಿತ್ತು ಎಂದು ವರದಿ ತಿಳಿಸಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…