2024ರ ಐಪಿಎಲ್ ಟೂರ್ನಿ ಆರಂಭಕ್ಕೆ ಒಂದು ದಿನ ಮುಂಚಿತವಾಗಿಯೇ ಧೋನಿ ನಾಯಕ ಸ್ಥಾನದಿಂದ ಕೆಳಗಿಳಿದಿದ್ದು, 2024ರ ಟೂರ್ನಿಯಲ್ಲಿ ಋತುರಾಜ್ ಹಾಲಿ ಚಾಂಪಿಯನ್ಸ್ ಸಿಎಸ್‌ಕೆ ತಂಡವನ್ನು ಮುನ್ನಡೆಸಲಿದ್ದಾರೆ.
2019ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಋತುರಾಜ್ ಗಾಯಕ್ವಾಡ್ 52 ಪಂದ್ಯಗಳು 51 ಇನ್ನಿಂಗ್ಸ್‌ಗಳಲ್ಲಿ 1,797 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ, 14 ಅರ್ಧಶತಕ, 159 ಬೌಂಡರಿ, 73 ಸಿಕ್ಸರ್‌ಗಳನ್ನ ಒಳಗೊಂಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ (Cricket Fans) ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. 42 ವರ್ಷದ ಮಹಿ, 2008ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ತಂಡದ ನಾಯಕನಾಗಿದ್ದಾರೆ. 2013ರಿಂದ 2 ವರ್ಷಗಳ ತಂಡವನ್ನು ಅಮಾನತುಗೊಳಿಸಿದ್ದು, ಹೊರತುಪಡಿಸಿ ಉಳಿದ ಎಲ್ಲ ಆವೃತ್ತಿಗಳಲ್ಲೂ ಚೆನ್ನೈ ತಂಡದ ಪರವಾಗಿಯೇ ಆಡಿದ್ದಾರೆ.
2022ರ ಆವೃತ್ತಿಯಲ್ಲಿ ಧೋನಿ ತಮ್ಮ ನಾಯತ್ವ ತೊರೆದಿದ್ದರು. ಈ ವೇಳೆ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದ್ರೆ ಸತತ ಸೋಲಿನಿಂದ ಬೇಸರಗೊಂಡ ರವೀಂದ್ರ ಜಡೇಜಾ, ಧೋನಿ ಅವರಿಗೆ ನಾಯಕ ಸ್ಥಾನವನ್ನು ಮರಳಿಸಿದ್ದರು. 2023ರ ಆವೃತ್ತಿಯಲ್ಲಿ ಮಹಿ ನಾಯಕತ್ವದಲ್ಲಿಯೇ ಚೆನ್ನೈ ತಂಡ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…