ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂಡಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್ (ಸಿಎ) ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮಂಗಳೂರಿನ ಯುವತಿ ರುಥ್ ಕ್ಲೆರ್ ಡಿಸಿಲ್ವ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರೋಸಿ ಮರಿಯ ಡಿಸಿಲ್ವ ಮತ್ತು ರಫೆರ್ಟ್ ಡಿಸಿಲ್ವ ಅವರ ಪುತ್ರಿಯಾಗಿರುವ ರುಥ್ ಕ್ಲೆರ್, ಸಿಎ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿ ಎನ್ನುವ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದಾರೆ.
ಕ್ಲೆರ ನಗರದ ಸಂತ ತೆರೆಸಾ ಸ್ಕೂಲ್‍ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದರು. ನಗರದ ಬಲ್ಮಠದ ಸಿಎ ವಿವಿಯನ್ ಪಿಂಟೋ ಕಂಪೆನಿಯಲ್ಲಿ ಆರ್ಟಿಕಲ್‍ಶಿಪ್ ಪೂರೈಸಿದ್ದರು.
ತನ್ನ ಸಾಧನೆ ಬಗ್ಗೆ ಆಭಿಪ್ರಾಯ ವ್ಯಕ್ತಪಡಿಸುರುವ ರುಥ್ ಕ್ಲೆರ್, ಪರೀಕ್ಷೆ ತುಂಬಾ ಕಠಿಣವಾಗಿತ್ತು. ಅತ್ಯುತ್ತಮ ರೀತಿಯಲ್ಲಿ ಬರೆದಿದ್ದೆ. ಆದರೆ ಪ್ರಥಮ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…