Featured

ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ – ಶಿಷ್ಠಾಚಾರ ಪಾಲನೆಯಾಗಿಲ್ಲ : ಸಿಎಂ ಆಕ್ರೋಶ – vishwanews24

ಸಿಗಂದೂರು ಸೇತುವೆ ಉದ್ಘಾಟನೆ: ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಹಾಗೂ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿರುವ ಸಿಗಂದೂರು ಬ್ರಿಡ್ಜ್ ಲೋಕಾರ್ಪಣೆ ವಿಚಾರವಾಗಿ ಉಂಟಾಗಿರುವ ರಾಜಕೀಯ ವಿವಾದ ಈಗ ಮತ್ತಷ್ಟು ಜೋರಾಗುತ್ತಿದೆ.

ಉದ್ಘಾಟನೆ ಕಾರ್ಯಕ್ರಮಕ್ಕೆ ತಮ್ಮನ್ನು ವಿಳಂಬವಾಗಿ ಆಹ್ವಾನಿಸಲಾಗಿದ್ದು, ಪೂರ್ವನಿಗದಿತ ಕಾರ್ಯಕ್ರಮದ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದ ಸಿಎಂ ಸಿದ್ದರಾಮಯ್ಯ ದಿನಾಂಕ ಮುಂದೂಡಿ ಎಂದು ಮನವಿ ಮಾಡಿದ್ದರು. ಆದರೆ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಫೇಸ್​​ಬುಕ್​​ನಲ್ಲಿಯೂ ಅಸಮಾಧಾನ ತೋಡಿಕೊಂಡ ಸಿಎಂ, ಕೇಂದ್ರ ಸಚಿವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ್ದರು.

ಈ ಕುರಿತ ಸಿಎಂ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago