ವಿಜಯಪುರ: ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ ಆಗಿ ಏಳು ಗೂಡಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬ್ಯಾಂಕ್ ಬಳಿ ನಡೆದಿದೆ.
ಸಿಗರೇಟ್ ಕಿಡಿಯಿಂದ ಹೊತ್ತಿದ ಬೆಂಕಿಗೆ, ಟೀ ಕಾಫಿ, ಫುಡ್ ಸ್ಟಾಲ್, ವಡಾಪಾವ್ ಶಾಪ್‌ಗಳು ಭಸ್ಮವಾಗಿದ್ದು, ಗೂಡಂಗಡಿಗಳಲ್ಲಿದ್ದ ಗ್ಯಾಸ್ ಸಿಲೆಂಡರ್‌ಗಳು ಬ್ಲಾಸ್ಟ್ ಆಗಿವೆ. ಇನ್ನೂ ಗೂಡಂಗಡಿಗೆ ಹೊತ್ತಿಕೊಂಡ ಬೆಂಕಿ ಪಕ್ಕದ ಮನೆಗೂ ವ್ಯಾಪಿಸಿದೆ. ಬ್ಲಾಸ್ಟ್ ಆದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಮೈಝುಮ್ ಎನ್ನುವಂತಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಸ್ಥಳದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಬೀಡು ಬಿಟ್ಟಿದ್ದು, ಪ್ರಕರಣ ದಾಖಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…