Featured

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ : ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಬಂಧನ – vishwanews24

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ : ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಬಂಧನ

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ  ಬಂಧಿಸಿರುವ ಘಟನೆ ನಡೆದಿದೆ.

ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ.

ಬಂಧನಕ್ಕೆ ಕಾರಣ ಏನು?

2018 ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್‌ ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ವರ್ಷದ ಜೂನ್‌ 29 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್‌ ಆಗಿ ಕೆಲಸ ಮಾಡುತ್ತಿದ್ದರು.

ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದ ರಾಹುಲ್‌ ಶುಕ್ರವಾರ ಸಂಜೆ 6:50 ರ ಸುಮಾರಿಗೆ ಮಹಾದ್ವಾರದ ಬಳಿ ತಪಾಸಣೆಗೆ ಬಂದಿದ್ದರು. KSESF ಸಿಬ್ಬಂದಿ ತಪಾಸಣೆ ವೇಳೆ 2 ಸಿಗರೇಟ್‌ ಪ್ಯಾಕ್‌, 60 ಗ್ರಾಮ್‌ನಷ್ಟು ಮಾದಕ ವಸ್ತು ರೀತಿಯ ವಸ್ತು ಪತ್ತೆಯಾಗಿತ್ತು. ಸಿಬ್ಬಂದಿ ಕೂಡಲೇ ಈ ಮಾಹಿತಿಯನ್ನ ಜೈಲು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಜೈಲು ಅಧೀಕ್ಷಕ ಪರಮೇಶ್‌ ಅವರು ನೀಡಿದ ದೂರನ್ನು ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago