ಹುಬ್ಬಳ್ಳಿ: ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುತ್ತಿರುವಾಗ ನಾವು ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದರು.
ಸಿ.ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸ್ಪೀಕರ್ ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನು ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತೆ. ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದರು.
ಸಿಟಿ ರವಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಪ್ರಕರಣ ವಿಳಂಬ ವಿಚಾರವಾಗಿ ಮಾತನಾಡಿದ ಅವರು, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು. ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲಿಸುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನು ಪಾಲಿಸಲ್ಲ. ಅವರಿವರು ಆರೋಪ ಮಾಡುತ್ತಾರೆ ಎಂದು ನಾವು ಇಲಾಖೆ ನಡೆಸಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…