ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟೀಸ್ ನೀಡಿದ್ದು, ಆದರೆ ಅವರು ವಿಚಾರಣೆಗೆ ಗೈರಾಗಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಶುಕ್ರವಾರ ಬೆಳಗ್ಗೆ ವಿಚಾರಣೆ ನಡೆಸಲು ಎಸ್‌ಐಟಿ ಸಿದ್ದವಾಗಿತ್ತು, ಆದರೆ, ರಮೇಶ್ ಜಾರಕಿಹೊಳಿ ಅವರು ಮಧ್ಯಾಹ್ನದವರೆಗೂ ವಿಚಾರಣೆಗೆ ಬರಲಿಲ್ಲ.
ಈ ಸಂಬಂಧ ರಮೇಶ್ ಜಾರಕಿಹೊಳಿ ಅವರು ತಮ್ಮ ವಕೀಲ ಶ್ಯಾಮ್ ಸುಂದರ್ ಅವರಿಗೆ ಪತ್ರ ನೀಡಿದ್ದು, “ನನಗೆ ವಿಪರೀತ ಜ್ವರ ಇದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಹೇಳಿದ್ದಾರೆ. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಎಸ್‌ಐಟಿ ಅಧಿಕಾರಿಗಳು ಪತ್ರವನ್ನು ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದು, ಮತ್ತೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿ ನೋಟಿಸ್ ನೀಡಬೇಕೋ ಅಥವಾ ಬೇರೆ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಎಂದು ಯೋಚಿಸುತ್ತಿದ್ದಾರೆ.
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…