Featured

ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಸಂತ್ರಸ್ತೆ ತನ್ನ ಹೇಳಿಕೆ ಬದಲಿಸಿಲ್ಲ , ಯುವತಿ ಪರ ವಕೀಲರ ಸ್ಪಷ್ಟನೆ -Vishwanews24

ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಸಂತ್ರಸ್ತೆ ತನ್ನ ಹೇಳಿಕೆ ಬದಲಿಸಿಲ್ಲ , ಯುವತಿ ಪರ ವಕೀಲರ ಸ್ಪಷ್ಟನೆ -Vishwanews24

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ 164 ಅಡಿಯಲ್ಲಿ ಹೇಳಿಕೆ ಕೊಟ್ಟಿದ್ದ ಯುವತಿ ಇದೀಗ ಮತ್ತೆ ಉಲ್ಟಾ ಹೊಡೆದಿದ್ದಾರೆ ಎಂಬ ಹೇಳಿಕೆಯನ್ನು ಯುವತಿ ಪರ ವಕೀಲರು ನಿರಾಕರಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಸೂರ್ಯ ಮುಕುಂದರಾಜ್ ಈ ಸುದ್ದಿ ಕಪೋಲಕಲ್ಪಿತ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ವ ಇಚ್ಚೆಯ ಹೇಳಿಕೆಯನ್ನು ನೀಡಿದ್ದರು. ಇದಾದ ಬಳಿಕ ಎಸ್‌ಐಟಿ ವಿಚಾರಣೆಗೂ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದರು.ಈ ನಡುವೆ ಯುವತಿ ತಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ಗೆ ಬಳಕೆ ಮಾಡಲಾಗಿದೆ ಎಂದು ಯುವತಿ ಎಸ್‌ಐಟಿ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎಂದು ಸುದ್ದಿ ಹರಿಯಬಿಡಲಾಗಿತ್ತು.

ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ಆದರೆ ಈ ಸುದ್ದಿ ಕೇವಲ ಊಹಾಪೋಹ ಎಂದು ಯುವತಿ ಪರ ವಕೀಲರು ನಿರಾಕರಣೆ ಮಾಡಿದ್ದಾರೆ. ಯುವತಿ ಈ ರೀತಿಯ ಹೇಳಿಕೆ ಕೊಟ್ಟಿಲ್ಲ. ಈ ಸುದ್ದಿ ಸತ್ಯಕ್ಕೆ ದೂರವಾಗಿದೆ. ಯುವತಿಯಿಂದಲೂ ಸ್ಪಷ್ಟನೆ ಕೊಡಿಸಲು ಪ್ರಯತ್ನ ನಡೆಸಲಾಗುವುದು. ಯುವತಿ ತಾನು ಈ ಹಿಂದೆ ಕೊಟ್ಟ ಹೇಳಿಕೆಗೆ ಬದ್ಧಳಾಗಿದ್ದಾರೆ. ಆದರೂ ಯಾರು ಕಪೋಲಕಲ್ಪಿತ ಸುದ್ದಿಯನ್ನು ಹರಿಯಬಿಟ್ಟಿದ್ದಾರೆ ಗೊತ್ತಿಲ್ಲ ಎಂದು ಸೂರ್ಯ ಮುಕುಂದರಾಜ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಮಾಧ್ಯಮಗಳ ಜೊತೆಗೆ ಮಾತನಾಡಿದ ಯುವತಿ ಪರ ವಕೀಲರಾದ ಜಗದೀಶ್ ಕುಮಾರ್ ಅವರೂ ಇದನ್ನು ಅಲ್ಲಗಳೆದಿದ್ದಾರೆ. ಯಾರು ಈ ಸುದ್ದಿಯನ್ನು ಹರಡುತ್ತಿದ್ದಾರೆ ಗೊತ್ತಿಲ್ಲ,ಆದರೆ ನ್ಯಾಯಾಲಯ ಗಮನಿಸುತ್ತಿದೆ, ಇಂತಹ ಊಹಾಪೋಹಗಳಿಗೆ ತಲೆಕೆಡಿಕೊಳ್ಳಬೆಕಾಗಿಲ್ಲ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ಅತ್ಯಾಚಾರ ದೂರು ನೀಡಿದ್ದರು. ಯುವತಿಯ ದೂರಿನ ಆಧಾರದಲ್ಲಿ ರಮೇಶ್ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿದೆ. ಈ ಇನ್ನು ರಮೇಶ್ ಜಾರಕಿಹೊಳಿ ಕೋವಿಡ್‌ ಕಾರಣ ಒಡ್ಡಿ ಎಸ್‌ಐಟಿ ತನಿಖೆಗೆ ಹಾಜರಾಗಿಲ್ಲ

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago