ಬೆಂಗಳೂರು, : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ.
ಜನಾಧಿಕಾರ ಸಂಘರ್ಷ ಪರಿಷತ್ 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಈ ಖಾಸಗಿ ಮೊಕದ್ದಮೆ ಅರ್ಜಿ ಸಲ್ಲಿಸಿದೆ. ಸಿಡಿ ಪ್ರಕರಣದಲ್ಲಿ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ರಮೇಶ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರೂ ಈ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಲ್ಲ ಎಂಬ ಆರೋಪದಲ್ಲಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ KSRTC ಬಸ್ ಸಂಚಾರ ಸ್ಥಗಿತ -Vishwanews24
ಮಾರ್ಚ್ 16 ರಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ರಮೇಶ ಜಾರಕಿಹೊಳಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ನೀಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈ ದೂರಿನ ಆಧಾರದಲ್ಲಿ ಪೊಲೀಸ್ ಆಯುಕ್ತ ಕಮಲ್‌ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಬಿ. ಮಾರುತಿ ಎಫ್‌ಐಆರ್ ದಾಖಲಿಸದೆ ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನೇ ವಿಚಾರಣೆಗೆ ಒಳಪಡಿಸಿದ್ದರು ಎಂದು ಈ ಮೊಕದ್ದಮೆಯಲ್ಲಿ ದೂರಲಾಗಿದೆ. ನ್ಯಾಯಾಲಯವು ಈ ಮೊಕದ್ದಮೆಯನ್ನು ಅಂಗೀಕರಿಸಿದ್ದು ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.
ಉಡುಪಿ: ಮುಷ್ಕರ ಹಿನ್ನೆಲೆ ರಸ್ತೆಗಿಳಿಯದ KSRTC ಬಸ್‌ಗಳು ; ಖಾಸಗಿ ಬಸ್‌ಗಳ ಮೊರೆ ಹೋದ ಪ್ರಯಾಣಿಕರು -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…