ಸಿಡಿ ಪ್ರಕರಣ : ಯುವತಿಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ : ಶಶಿಕಲಾ ಜೊಲ್ಲೆ -Vishwanews24

Featured, ರಾಜ್ಯ ನ್ಯೂಸ್

ಸಿಡಿ ಪ್ರಕರಣ : ಯುವತಿಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ : ಶಶಿಕಲಾ ಜೊಲ್ಲೆ -Vishwanews24

ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಹಿಂದೇಟು ಹಾಕೋದಿಲ್ಲ. ಆಕೆಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ‘ ಯುವತಿ ಹೊಸ ವಿಡಿಯೋದಲ್ಲಿ ಏನು ಹೇಳಿದ್ದಾರೆ ಅನ್ನೋದನ್ನ ನಾನಿನ್ನೂ ನೋಡಿಲ್ಲ. ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಸ್ವತಃ ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು.

ಇನ್ನು ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ. ಯುವತಿಗೆ ರಕ್ಷಣೆ ನೀಡ್ತೇವೆ’ ಎಂದರು.

ಇದನ್ನೂ ಓದಿ : ಕರಾವಳಿಯಲ್ಲಿ ಜಲ್ಲಿ – ಶಿಲೆಕಲ್ಲಿ ಸಾಗಾಟ ನಿರ್ಬಂಧ ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್, ರಘುಪತಿ ಭಟ್ ನೇತೃತ್ವದಲ್ಲಿ ಸಿಎಂ ಭೇಟಿ -Vishwanews24