ಬೆಂಗಳೂರು: ಸಿಡಿ ಸಂತ್ರಸ್ತೆಯ ಮನವಿಯ ಬೆನ್ನಲ್ಲೇ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿರುವುದಾಗಿ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ರಮೇಶ್ ಕುಮಾರ್, ಸದನದಲ್ಲಿ ನಾನು ಸರ್ಕಾರಕ್ಕೆ, ಸಂತ್ರಸ್ತೆಯನ್ನು ಹುಡುಕಾಟ ನಡೆಸಿದ್ದೀರ, ಆಕೆ ಎಲ್ಲಿದ್ದಾಳೆಂದು ಪ್ರಶ್ನೆ ಮಾಡಿದ್ದೆ. ಆಕೆ ಮನವಿ ಕೇಳಿದ ತಕ್ಷಣ ಆಕೆ ಸಂತ್ರಸ್ತೆ ಆಗುತ್ತಾಳೆ ಆಕೆಯ ಜೀವ ಮತ್ತು ಆಕೆಯ ಕುಟುಂಬದ ರಕ್ಷಣೆ ಸರ್ಕಾರದ ಕರ್ತವ್ಯ. ಆದರೆ ಆಕೆ ನಮಗೆ ಮನವಿ ಮಾಡಿಕೊಂಡಿದ್ದಾಳೆ. ನಾನು ಒಬ್ಬ ಹೆಣ್ಣು ಮಗಳ ತಂದೆಯಾಗಿ ಆಕೆ ಮತ್ತು ಆಕೆಯ ಕುಟುಂಬದ ರಕ್ಷಣೆಗೆ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಇದೊಂದು ಮಾನವೀಯ ಸಂಬಂಧ ವಿಚಾರವಾಗಿರುವುದರಿಂದ ನಮ್ಮ ಶಕ್ತಿಮೀರಿ ಆಕೆಗೆ ರಕ್ಷಣೆ ಕೊಡುತ್ತೇವೆ ಎಂದರು.
ಆಕೆಯ ಜೀವ ಮತ್ತು ಪ್ರಾಣದ ರಕ್ಷಣೆಗಾಗಿ ನಾನು ನಮ್ಮ ನಾಯಕರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಷಯವಾಗಿ ಅಸಹಾಯಕನಲ್ಲ, ನಮ್ಮ ನಾಯಕರು ಮತ್ತು ಪಕ್ಷದ ಹಿರಿಯರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಸಂತ್ರಸ್ತೆಯ ರಕ್ಷಣೆಗೆ ಮಾತ್ರ ನಾವು ಸದಾ ಸಿದ್ಧರಾಗಿರುವುದಾಗಿ ಭರವಸೆ ನೀಡಿದರು.
ಯುವತಿ ಎರಡನೇ ವೀಡಿಯೋ ಮೂಲಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್ ಮತ್ತು ಮಹಿಳಾ ಸಂಘಟನೆಗಳು ನಮ್ಮ ತಂದೆ ತಾಯಿಗೆ ರಕ್ಷಣೆ ಕೊಡಬೇಕೆಂದು ಮನವಿ ಮಾಡಿಕೊಂಡಿದ್ದರು.
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…