ಬೆಂಗಳೂರು,: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ” ಎಂದು ಕೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ವಿಟ್ಲ: ವಿವಾಹ ಸಮಾರಂಭಕ್ಕೆ ಬಂದಿದ್ದ ಬಾಲಕನ ಮೇಲೆ ಲೈಂಗಿಕ ಕಿರುಕುಳ -Vishwanews24
“ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ” ಎಂದು ಆರೋಪಿಸಿದ್ದಾರೆ.
“ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ” ಎಂದಿದ್ದಾರೆ.
ಇದನ್ನೂ ಓದಿ : ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆದ ಆಯನೋತ್ಸವ ಹಾಗೂ ಸಿರಿ ಜಾತ್ರಾ ಮಹೋತ್ಸವ -Vishwanews24
“ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿ, ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು?” ಎಂದು ಕೇಳಿದ್ದಾರೆ.
“ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ?” ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…