ಬೆಂಗಳೂರು,: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ , ಸಿಆರ್‌ಪಿಸಿ ಸೆಕ್ಷನ್ 164 ಅಡಿ ನ್ಯಾಯಾಧೀಶರ ಮುಂದೆ ದಾಖಲಿಸಿಕೊಳ್ಳಲಾದ ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸಬೇಕೆಂದು ಕೋರಿ ಆಕೆಯ ಪೋಷಕರು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಒತ್ತಡದಲ್ಲಿ ತನ್ನ ಮಗಳು ಹೇಳಿಕೆ ನೀಡಿದ್ದು ಅದನ್ನು ಪರಿಗಣಿಸಬಾರದು. ಯಾವುದೋ ಒತ್ತಡ ಮತ್ತು ಪ್ರಭಾವದ ಕಾರಣಕ್ಕೆ ಮಗಳು ಈ ರೀತಿ ಹೇಳಿಕೆ ನೀಡಿದ್ದಾಳೆ. ಆಕೆ ಸ್ವಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಅಲ್ಲದೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರ ಉಪಸ್ಥಿತಿಯಲ್ಲಿ ಮಗಳ ಹೇಳಿಕೆ ದಾಖಲಾಗಿದೆ. ಕಾನೂನು ಪ್ರಕಾರ ಇದೊಂದು ಲೋಪ ಎಂದು ಕೂಡ ಮನವಿಯಲ್ಲಿ ತಿಳಿಸಲಾಗಿದೆ.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ರಾಜಕೀಯ ಮೇಲಾಟಕ್ಕೆ ನಾನು ನನ್ನ ಮಗಳು ಹಾಗೂ ಕುಟುಂಬ ಬಲಿಪಶುಗಳಾಗಿದ್ದೇವೆ. ಈ ಅರ್ಜಿ ಇತ್ಯರ್ಥವಾಗುವವರೆಗೂ ಮಗಳ ಹೇಳಿಕೆಯನ್ನು ಪರಿಗಣಿಸಿ ಯಾವುದೇ ಕ್ರಮ ಜರುಗಿಸದಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕೆಂದು ಎಂದು ತಕರಾರು ಅರ್ಜಿಯಲ್ಲಿ ವಿನಂತಿಸಲಾಗಿದೆ.
ಅರ್ಜಿಯಲ್ಲಿ . ಗೃಹ ಇಲಾಖೆ, ಎಸ್‌ಐಟಿ ಹಾಗೂ ಕಬ್ಬನ್‌ಪಾರ್ಕ್ ಠಾಣೆಯ ಮೇಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…