Featured

ಸಿಡಿ ಪ್ರಕರಣ : ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು -Vishwanews24

ಸಿಡಿ ಪ್ರಕರಣ : ಒತ್ತಡದಲ್ಲಿ ತನ್ನ ಮಗಳು ಹೇಳಿಕೆ ನೀಡಿದ್ದು ಅದನ್ನು ಪರಿಗಣಿಸಬಾರದು ..

ರಾಜಕೀಯ ಮೇಲಾಟಕ್ಕೆ ನಾನು ನನ್ನ ಮಗಳು ಹಾಗೂ ಕುಟುಂಬ ಬಲಿಪಶುಗಳಾಗಿದ್ದೇವೆ.

ಹೇಳಿಕೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು -Vishwanews24

ಬೆಂಗಳೂರು,: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ , ಸಿಆರ್‌ಪಿಸಿ ಸೆಕ್ಷನ್‌ 164 ಅಡಿ ನ್ಯಾಯಾಧೀಶರ ಮುಂದೆ ದಾಖಲಿಸಿಕೊಳ್ಳಲಾದ ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸಬೇಕೆಂದು ಕೋರಿ ಆಕೆಯ ಪೋಷಕರು ಬುಧವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಒತ್ತಡದಲ್ಲಿ ತನ್ನ ಮಗಳು ಹೇಳಿಕೆ ನೀಡಿದ್ದು ಅದನ್ನು ಪರಿಗಣಿಸಬಾರದು. ಯಾವುದೋ ಒತ್ತಡ ಮತ್ತು ಪ್ರಭಾವದ ಕಾರಣಕ್ಕೆ ಮಗಳು ಈ ರೀತಿ ಹೇಳಿಕೆ ನೀಡಿದ್ದಾಳೆ. ಆಕೆ ಸ್ವಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಅಲ್ಲದೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್‌ ಅವರ ಉಪಸ್ಥಿತಿಯಲ್ಲಿ ಮಗಳ ಹೇಳಿಕೆ ದಾಖಲಾಗಿದೆ. ಕಾನೂನು ಪ್ರಕಾರ ಇದೊಂದು ಲೋಪ ಎಂದು ಕೂಡ ಮನವಿಯಲ್ಲಿ ತಿಳಿಸಲಾಗಿದೆ.

ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24

ರಾಜಕೀಯ ಮೇಲಾಟಕ್ಕೆ ನಾನು ನನ್ನ ಮಗಳು ಹಾಗೂ ಕುಟುಂಬ ಬಲಿಪಶುಗಳಾಗಿದ್ದೇವೆ. ಈ ಅರ್ಜಿ ಇತ್ಯರ್ಥವಾಗುವವರೆಗೂ ಮಗಳ ಹೇಳಿಕೆಯನ್ನು ಪರಿಗಣಿಸಿ ಯಾವುದೇ ಕ್ರಮ ಜರುಗಿಸದಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕೆಂದು ಎಂದು ತಕರಾರು ಅರ್ಜಿಯಲ್ಲಿ ವಿನಂತಿಸಲಾಗಿದೆ.

ಅರ್ಜಿಯಲ್ಲಿ . ಗೃಹ ಇಲಾಖೆ, ಎಸ್‌ಐಟಿ ಹಾಗೂ ಕಬ್ಬನ್‌ಪಾರ್ಕ್‌ ಠಾಣೆಯ ಮೇಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಮೇಲೆ ಈ ಕೇಸ್‍ನ್ನು ಸಿಬಿಐನಿಂದ ತನಿಖೆ ಮಾಡಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ : ಶಿವರಾಮೇಗೌಡ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago