Featured

ಸಿಡಿ ಬಿಡುತ್ತೇನೆ ನೋಡು ಬಾ ಎಂದು ಬೆದರಿಕೆ ಹಾಕುತ್ತಿದ್ದಾನೆ : ಡಿಕೆ ಶಿ ವಿರುದ್ಧ ರಮೇಶ್ ಜಾರಕಿಹೊಳಿ ಗಂಭೀರ ಆರೋಪ – Vishwanews24

ನೂರು ಸಿಡಿ ಬರಲಿ, ನಾನು ಗಟ್ಟಿ ಇದ್ದೇನೆ : ರಮೇಶ್ ಜಾರಕಿಹೊಳಿ

ಬೆಳಗಾವಿ: ನಮ್ಮ ಕೆಲವು ಮಂತ್ರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಹೆದರಿಸುತ್ತಿದ್ದಾನೆ. ನೀನು ಬರ್ತೀಯೋ ಅಥವಾ ಸಿಡಿ (CD) ಬಿಡುಗಡೆ ಮಾಡಲೋ ಎಂದು ಹೆದರಿಸುತ್ತಿದ್ದಾನೆ. ಇಂದು ನಮ್ಮ ಪಕ್ಷಕ್ಕೆ ಬಾಂಬೆಯಿಂದ ಬಂದವರಿಗೆ ಸಿಡಿ ಬಿಡುತ್ತೇನೆ ನೋಡು ಬಾ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ.

ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನನ್ನ ಮಗ ಅಮರನಾಥ ಬಳಿ ಅವನು ಸ್ಪಷ್ಟವಾಗಿ ಹೇಳಿದ್ದಾನೆ. ನನ್ನ ಸಿಡಿ ಕೇಸ್ ಆದಾಗ ಆತನ ಉದ್ಯೋಗ ಅದೇ ಎಂದು ಸ್ಪಷ್ಟವಾಗಿ ಹೇಳಿದ್ದಾನೆ. ಬೇಕಾದರೆ ನನ್ನ ಮಗನ ಕರೆದೊಯ್ದು ಸುಳ್ಳೋ ನಿಜವೋ ಎಂಬುದನ್ನು ಲಕ್ಷ್ಮಿದೇವಿ ಮೇಲೆ ಆಣೆ ಮಾಡಿಸಿ. ಹೀಗಾದರೆ ನಾನು ಏನು ಮಾಡಲು ಸಾಧ್ಯ? ಯುದ್ಧ ಮಾಡೋಣ ಬಾ, ಬೇಕಾದಷ್ಟು ಗಟ್ಟಿ ಇದ್ದೇನೆ. ಕನಕಪುರಕ್ಕೆ ಬಾ ಎಂದರೆ ಅಲ್ಲಿಯೇ ಬರುತ್ತೇನೆ ಬಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದರು.

ನೂರು ಸಿಡಿ ಬರಲಿ, ನಾನು ಗಟ್ಟಿ ಇದ್ದೇನೆ. ನಮ್ಮ ಕೆಲವು ಮಂತ್ರಿಗಳಿಗೆ ಹೆದರಿಸುತ್ತಿದ್ದಾನೆ. ನೀ ಬರ್ತಿಯೋ, ಬಿಡುಗಡೆ ಮಾಡಲೋ ಎಂದು ಹೆದರಿಸುತ್ತಿದ್ದಾನೆ. ಇಂದು ನಮ್ಮ ಪಕ್ಷಕ್ಕೆ ಬಾಂಬೆಯಿಂದ ಬಂದವರಿಗೆ ಬಿಡುತ್ತೇನೆ ನೋಡು ಅಂತ ಹೆದರಿಸುತ್ತಿದ್ದಾನೆ ಎಂದು ಪರೋಕ್ಷವಾಗಿ ಸಚಿವ ನಾರಾಯಣಗೌಡರ ವಿಚಾರವನ್ನು ರಮೇಶ್ ಜಾರಕಿಹೊಳಿ ಪ್ರಸ್ತಾಪ ಮಾಡಿದ್ರಾ? ಎಂಬ ಅನುಮಾನ ಹುಟ್ಟಿದೆ.

ನಾನು ಗಟ್ಟಿ ಇದ್ದೀನಿ, ನಮ್ಮ ಅಣ್ಣತಮ್ಮಂದಿರು, ನನ್ನ ಧರ್ಮಪತ್ನಿ ನನ್ನ ಜೊತೆಗಿದ್ದಾರೆಂದು ಅಂಜಲಿಲ್ಲ. ಸಿಡಿ ಪಾರ್ಟ್‌ನರ್ ಬೆಳಗಾವಿಯಲ್ಲಿ ಇದ್ದಾರೆ. ಅದಕ್ಕೆ ಹುಷಾರಾಗಿ ಇರಬೇಕು. ಮತ್ತೊಬ್ಬ ಡ್ರೈವರ್ ಈಗ ಕೂಡಿದ್ದಾನೆ. ಡ್ರೈವರ್ ಹಾಗೂ ಮಾಲೀಕ ಕೂಡಿದ್ದಾರೆ ಎಂದು ಪರೋಕ್ಷವಾಗಿ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಾರಕಿಹೊಳಿ ಯುದ್ಧ ಮಾಡೋರು, ಷಡ್ಯಂತ್ರ ಮಾಡುವ ಮಂದಿ ಅಲ್ಲ. ನಾನು ಯಾರ ವೈಯಕ್ತಿಕ ಜೀವನ ಮುಟ್ಟಲ್ಲ. ನನ್ನ ಕಡೆ ಸಾಕ್ಷಿ ಇದೆ. ಆದರೆ ನಾನು ಬಿಡುಗಡೆ ಮಾಡಲ್ಲ. ಅವನ ಪತ್ನಿಯೂ ನನ್ನ ತಂಗಿ, ಅವರ ಹಾಗೇ ಮನೆ ಮುರಿಯೋದು ಬೇಡ. ನನಗೊಬ್ಬನಿಗೆ ಕಷ್ಟ ಆಗಿದೆ, ನಾನು ಹೊರಬಂದಿದ್ದೇನೆ. ಬೇರೆ ಯಾರಿಗೂ ಈ ರೀತಿ ಆಗಬಾರದು ಎಂಬುದು ನನ್ನ ಉದ್ದೇಶವಾಗಿದೆ. ಇಂತಹ ಮನುಷ್ಯನ ಕೈಯಲ್ಲಿ ಅಕಸ್ಮಾತ್ ತಪ್ಪಿ ರಾಜ್ಯ ಸಿಕ್ಕರೆ ಪರಿಸ್ಥಿತಿ ಏನಾಗುತ್ತೆ? ಟೋಲ್‌ಗಳು ಇದ್ದ ಹಾಗೇ ಮತ್ತೊಂದು ಡಿಕೆಶಿ ಟೋಲ್ ಬರುತ್ತದೆ ಎಂದು ಕಿಡಿಕಾರಿದರು

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

3 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

9 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago