Featured

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ  ಗರ್ಭಿಣಿ ಮಹಿಳೆ ಸಾವು

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು ವರ್ಷದ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿ 8 ಗಂಟೆಗೆ ಹಾರ್ನ್ಸ್‌ಬೈಯ ಜಾರ್ಜ್ ಸ್ಟ್ರೀಟ್‌ನಲ್ಲಿ ಧಾರೇಶ್ವರ್ ಮತ್ತು ಅವರ ಕುಟುಂಬವು ಪಾದಚಾರಿ ಮಾರ್ಗವನ್ನು ದಾಟಲು ಪ್ರಯತ್ನಿಸಿತ್ತು. ಆ ಸಮಯದಲ್ಲಿ ಕಿಯಾ ಕಾರ್ನಿವಲ್ ಕಾರು ಕಾರು ನಿಧಾನಗೊಳಿಸಿತ್ತು, ಆದರೆ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿತ್ತು. ಆ ಡಿಕ್ಕಿ ಪರಿಣಾಮ ಕಿಯಾ ಕಾರು ಮುಂದಕ್ಕೆ ದೂಡಿದಂತಾಗಿ ಪಾರ್ಕ್ ಕಡೆಗೆ ದಾಟುತ್ತಿದ್ದ ಮೂವರಿಗೂ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಸಮನ್ವಿತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಸಮನ್ವಿತಾ ಹಾಗೂ ಅವರ ಗರ್ಭದಲ್ಲಿರುವ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಎಂಡಬ್ಲ್ಯೂ ಕಾರನ್ನು ಓಡಿಸುತ್ತಿದ್ದ 19 ವರ್ಷದ ಚಾಲಕ ಆರನ್ ಪಾಪಜೋಗ್ಲುನನ್ನು ಪೊಲೀಸರು ಬಂಧಿಸಿದ್ದಾರೆ. ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಆರೋಪದ ಅಡಿ ಕೇಸ್ ದಾಖಲಾಗಿದೆ. ಅಪಘಾತ ಮಾಡಿದ ಬಿಎಂಡಬ್ಲ್ಯೂ ಚಾಲಕನಿಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

8 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

11 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

11 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

11 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

11 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

12 hours ago