ಬೆಂಗಳೂರು :ಸಾಮಾನ್ಯವಾಗಿ ಸಿನಿಮಾ ತಾರೆಗಳು ತಮ್ಮ ಸಿನಿಮಾ ಬಿಡುಗಡೆ ಸಮಯದಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಮಠಕ್ಕೆ ಅಕ್ಕಿ, ಸಕ್ಕರೆ, ಬೇಳೆಯನ್ನು ದಾನ ಮಾಡಿ ಬರುತ್ತಿದ್ದರು. ಆದರೆ ಇದನ್ನು ಅವರು ಪ್ರಚಾರಕ್ಕಾಗಿ ಎಂದೂ ಬಳಸಿಕೊಂಡಿಲ್ಲ. ಸಾಕಷ್ಟು ಮಂದಿ ತಾರೆಗಳ ಈ ಅಳಿಲು ಸೇವೆ ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗದಂತಿರುತ್ತದೆ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನ್ನ ದಾಸೋಹಕ್ಕೆ ಕೈ ಜೋಡಿಸಿದ್ದು, ಲಕ್ಷಾಂತರ ಬಡ ಮಕ್ಕಳ ಹಸಿವು ನೀಗಿಸುತ್ತಿದ್ದಾರೆ. ಮಠದ ದಾಸೋಹಕ್ಕೆ ಪ್ರತಿ ತಿಂಗಳು ಎರಡು ಕ್ವಿಂಟಾಲ್ ಅಕ್ಕಿ, ಬೇಳೆ, ಸಕ್ಕರೆ ನೀಡಲಿದ್ದಾರೆ ಎಂದು ಸಿದ್ಧಗಂಗಾ ಮಠದ ಫೇಸ್ಬುಕ್ನಲ್ಲಿ ಹಂಚಿಕೊಳ್ಳಲಾಗಿದೆ. ಆದರೆ, ಈ ಬಗ್ಗೆ ನಟ ದರ್ಶನ್ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿಯಿಲ್ಲ. ಇದುವರೆಗೆ ದಾಸ ಮಾಡಿರುವ ಸಮಾಜ ಸೇವೆ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ.
ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕಯೋಗಿ ಹೆಸರುಗಳಿಂದ ಕರೆಸಿಕೊಳ್ಳುತ್ತಿದ್ದ ಸಿದ್ಧಗಂಗಾ ಮಠದ 111 ವರ್ಷಗಳ ಕಾಲ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ರಾಜಕಾರಣ, ಧರ್ಮ, ಜಾತಿಗಳನ್ನು ಮೀರಿ ಬೆಳೆದಿದ್ದರು. ನಟ ದರ್ಶನ್ ಅವರಂತೆ ನೂರಾರು ಭಕ್ತರು ಕೂಡ ಇದೀಗ ಮಠದ ಸಹಾಯಕ್ಕೆ ಮುಂದಾಗುತ್ತಿದ್ದಾರೆ.
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…