Featured

ಸಿದ್ದಗಂಗಾ ಶ್ರೀ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ತುಮಕೂರು:ಸಿದ್ದಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶಿವಕುಮಾರ ಸ್ವಾಮಿಜಿಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು ಅವರನ್ನು ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀಗಳಿಗೆ ಒಟ್ಟು 8 ಸ್ಟಂಟ್‌ಗಳನ್ನು ಅಳವಡಿಸಲಾಗಿದ್ದು ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಶ್ರೀಗಳು ಲವಲವಿಕೆಯಿಂದ ಇದ್ದಾರೆ ಎಂದು ಮಠದ ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಮುಂಜಾನೆ ಆಸ್ಪತ್ರೆಗೆ ಬಂದ ಶ್ರೀಗಳು ಕಾರು ಇಳಿದ ಬಳಿಕ ನಡೆದುಕೊಂಡೆ ಆಸ್ಪತ್ರೆ ಒಳಗೆ ತೆರಳಿದ್ದಾರೆ.  ಶ್ರೀಗಳಿಗೆ ರಕ್ತ ಪರೀಕ್ಷೆ ನಡೆಸಿ ವರದಿ ಬಂದ ಬಳಿಕ ಮಠಕ್ಕೆ ಕರೆದೊಯ್ಯಲಾಗುವ ಬಗ್ಗೆ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.

ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ತಪಾಸಣೆ ಪ್ರಾರಂಭವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರೆದುಕೊಂಡು ಬಂದಿದ್ದೇವೆ ಅಂತ ಸಿದ್ದಗಂಗಾ ಮಠದ ಕಿರಿಯ ಶ್ರೀ ಗಳು ಹೇಳಿದ್ದಾರೆ. ಸ್ವಲ್ಪ ಆರೋಗ್ಯದಲ್ಲಿ ಏರುಪೇರು ಇತ್ತು. ಅದಕ್ಕಾಗಿ ಅವರನ್ನು ಕರೆದುಕೊಂಡು ಬಂದಿದ್ದೇವೆ. ಅವರು ಟೆಸ್ಟ್ ಗೂ ಒಪ್ಪಿಲ್ಲ. ಈಗ ಟೆಸ್ಟ್ ಗಳು ನಡೀತಾ ಇದೆ. ಒಟ್ಟು ಐದರಿಂದ ಆರು ವೈದ್ಯರುಗಳ ಟೀಮ್ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ಸ್ಟಂಟ್ ಶಾಶ್ವತ ಅಲ್ಲ ಆರೇಳು ತಿಂಗಳು ಅಷ್ಟೆ ಬರೋದು. ಸ್ಟಂಟ್ ವ್ಯತ್ಯಾಸ ಕಂಡು ಬಂದಿರೋದ್ರಿಂದ ಅಲ್ಟ್ರಾಸೌಂಡ್ ಕೂಡ ಮಾಡಲಾಗುತ್ತೆ. ಈಗಾಗಲೇ ರಕ್ತ ಪರೀಕ್ಷೆ ಇಸಿಜಿಗಳನ್ನು ಮಾಡಲಾಗುತ್ತಿದೆ. ರಿಪೋರ್ಟ್ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗುವ ಬಗ್ಗೆ ಹಾಗೂ ಮುಂದಿನ ಟ್ರೀಟ್ ಮೆಂಟ್ ಬಗ್ಗೆ ಚಿಂತನೆ ನಡೆಸಲಿದ್ದೇವೆ ಅಂರ ವೈದ್ಯ ಡಾ. ರವೀಂದ್ರ ಸ್ಪಷ್ಟಪಡಿಸಿದ್ದಾರೆ. 6 ಮಂದಿ ವೈದ್ಯರ ತಂಡ ಶ್ರೀಗಳ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago