ನವದೆಹಲಿ: ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದು ಮೇ.20ರಂದು 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಇದರ ಅಧಿಕೃತ ಪ್ರಕಟಣೆ ಇಂದು ಸಂಜೆ ನಡೆಯಲಿರುವ ಸಿಎಲ್ ಪಿ ಸಭೆಯಲ್ಲಿ ನಡೆಯಲಿದೆ
ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ.
ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್‌ರಸ್ತೆಯ ಇಂದಿರಾಭವನದಲ್ಲಿ ಈ ಸಭೆ ಕರೆದಿದ್ದುಈ ಸಿಎಲ್ ಪಿ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.ವಿಧಾನಸಭೆ ಸದಸ್ಯರುಗಳು, ಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ.
ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಪಕ್ಷ ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು.
ಕೊನೆಗೂ ಡಿ.ಕೆ. ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…