Featured

ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಕೆಶಿ ಡಿಸಿಎಂ :  ಮೇ.20ರಂದು ಪ್ರಮಾಣವಚನ – Vishwanews24

ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಕೆಶಿ ಡಿಸಿಎಂ :  ಮೇ.20ರಂದು ಪ್ರಮಾಣವಚನ

ನವದೆಹಲಿ:  ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದು ಮೇ.20ರಂದು 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಇದರ ಅಧಿಕೃತ ಪ್ರಕಟಣೆ ಇಂದು ಸಂಜೆ ನಡೆಯಲಿರುವ ಸಿಎಲ್ ಪಿ ಸಭೆಯಲ್ಲಿ ನಡೆಯಲಿದೆ

ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ದೆಹಲಿಯಲ್ಲಿ ಪ್ರಕಟಿಸಿದ್ದಾರೆ.

ಇಂದು ಸಂಜೆ 7 ಗಂಟೆಗೆ ಶಾಸಕಾಂಗ ಸಭೆ ಕರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಂಗಳೂರಿನ ಕ್ವೀನ್ಸ್‌ರಸ್ತೆಯ ಇಂದಿರಾಭವನದಲ್ಲಿ ಈ ಸಭೆ ಕರೆದಿದ್ದುಈ ಸಿಎಲ್ ಪಿ ಸಭೆಯಲ್ಲೇ ನಾಯಕರ ಹೆಸರು ಕೂಡ ಅಧಿಕೃತವಾಗಿ ಘೋಷಣೆಯಾಗಲಿದೆ.ವಿಧಾನಸಭೆ ಸದಸ್ಯರುಗಳು, ಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ.

ತಮಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದರು. ಪಕ್ಷ ಸಂಕಷ್ಟದ ಸಮಯದಲ್ಲಿ ಪಕ್ಷದ ಸಾರಥ್ಯ ವಹಿಸಿಕೊಂಡು ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತಂದ ತಮಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದರು.

ಕೊನೆಗೂ ಡಿ.ಕೆ. ಶಿವಕುಮಾರ್ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದ್ದು, ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago