Featured

ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ : ದಿನೇಶ್ ಗುಂಡುರಾವ್ – Vishwanews24

ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ

ಬೆಂಗಳೂರು: ಮಾಂಸಹಾರ ಸೇವನೆಗೆ ಸಂಬಂಧಿಸಿದಂತೆ ಬಿಜೆಪಿಯವರು ಕೀಳು ರಾಜಕಾರಣ ಮಾಡುತ್ತಿದ್ದು, ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸಿದ್ದರಾಮಯ್ಯರಾಗಲಿ ಅಥವಾ ಇನ್ಯಾರೆ ಆಗಿರಲಿ ಏನನ್ನು ತಿನ್ನಬೇಕು?ಏನನ್ನು ತಿನ್ನಬಾರದು ಎಂದು ಬಿಜೆಪಿಯವರು ನಿರ್ಧರಿಸಬೇಕೆ?ನಮ್ಮ ಆಹಾರ, ನಮ್ಮ ಹಕ್ಕು.ಇದನ್ನು ಕೇಳಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವ ರ್ಯಾರು? ಊಟ ತನ್ನಿಚ್ಛೆ, ನೋಟ ಪರರಿಚ್ಛೆ ಅಲ್ಲವೇ.?” ಎಂದು ಪ್ರಶ್ನಿಸಿದ್ದಾರೆ.

“ಬೇಡರ ಕಣ್ಣಪ್ಪ ಶಿವಲಿಂಗಕ್ಕೆ ಮಾಂಸದ ನೈವೇದ್ಯ ಇಟ್ಟ.ಶಿವ ಕಣ್ಣಪ್ಪನಿಗೆ ಒಲಿಯಲಿಲ್ಲವೆ?ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ, ಇದೇ ಅಂತರಂಗ-ಶುದ್ಧಿ, ಇದೇ ಬಹಿರಂಗ-ಶುದ್ಧಿ, ಇದೇ ಕೂಡಲಸಂಗಮನೊಲಿಸುವ ಪರಿ! ಎಂದಿದ್ದಾರೆ ಬಸವಣ್ಣ.ಭಕ್ತಿ ಶುದ್ಧವಾಗಿರಬೇಕು “ಎಂದು ಹೇಳಿದ್ದಾರೆ.

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ – Vishwanews24

ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಸಕಲೇಶಪುರದಲ್ಲಿ‌‌ ಮದುವೆಯ ದಿನವೇ ಮಾಂಸಹಾರ ಮಾಡುತ್ತಾರೆ.ಅದು ಅವರ ಆಹಾರ ಪದ್ದತಿ.ಇನ್ನು ಮಲೆನಾಡಿನ ಕೆಲವು ಕಡೆ ಎಲ್ಲಾ ಹಬ್ಬಗಳಿಗೂ ಮಾಂಸಹಾರ ಮಾಡುತ್ತಾರೆ. ಸಿ.ಟಿ ರವಿ ಮತ್ತು ಪ್ರತಾಪ ಸಿಂಹ ಮಲೆನಾಡಿನವರು.ಗಣೇಶನ ಹಬ್ಬದ ದಿವಸ ಅವರ ಭಾಗದಲ್ಲಿ ಮಾಂಸಹಾರ ಮಾಡುವುದನ್ನು ಅವರು ನಿರಾಕರಿಸುತ್ತಾರೆಯೇ? ಎಂದಿದ್ದಾರೆ.

ಸಿದ್ದರಾಮಯ್ಯನವರನ್ನು ಕಂಡರೆ ಬಿಜೆಪಿಯವರಿಗೆ ನವರಂಧ್ರಗಳಲ್ಲೂ ನಡುಕ ಶುರುವಾಗಿದೆ.ಹಾಗಾಗಿ ಅವರು ಏನು ತಿನ್ನುತ್ತಾರೆ, ಏನು ಉಡುತ್ತಾರೆ ಎಂದು ವಿವಾದ ಸೃಷ್ಟಿಸಿ ರಾಜಕೀಯ ಮಾಡುತ್ತಿದ್ದಾರೆ.ಮಾಂಸಹಾರ ತಿನ್ನುವುದು ತಪ್ಪಾದರೆ, ಮಾಂಸಹಾರಿಗಳು‌ ನಮ್ಮ ಪಕ್ಷಕ್ಕೆ ಓಟು ಹಾಕುವುದು ಬೇಡ ಎಂದು ಬಿಜೆಪಿಯವರು ಹೇಳಲಿ ಹೀಗೆ ಹೇಳುವ ತಾಕತ್ತು ಬಿಜೆಪಿಯವರಿಗಿದೆಯೇ? ಎಂದು ಸವಾಲ್ ಹಾಕಿದ್ದಾರೆ.

ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

13 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

13 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

13 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

13 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

14 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

14 hours ago