ಸಿದ್ದರಾಮಯ್ಯನವರು ಸರ್ಕಾರ ಉಳಿಸಲು ಪ್ರಾಮಾಣಿಕವಾಗಿ ಯತ್ನಿಸುತ್ತಿದ್ದಾರೆ : ಯು.ಟಿ.ಖಾದರ್ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಕಲಬುರಗಿ : ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ತೆರಿಗೆ ವಸೂಲಿಯಲ್ಲಿ ಹಿಂದೆ ಬೀಳುವ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ರಾಜ್ಯದ ಪ್ರತಿ ಸ್ಥಳೀಯ ಸಂಸ್ಥೆಯಲ್ಲಿ ಸುಮಾರು ಶೇ. 15-20 ರಷ್ಟು ತೆರಿಗೆ ವಸೂಲಿ ಬಾಕಿ ಉಳಿದಿದೆ. ಈ ಮಧ್ಯೆ ಕೆಳಹಂತದ ಅಧಿಕಾರಿಗಳು ಮುಖ್ಯವಾಗಿ ಈ ನಿಟ್ಟಿನಲ್ಲಿ ಹೆಚ್ಚು ಆಸ್ಥೆಯೊಂದಿಗೆ ಕಾರ್ಯನಿರ್ವಹಿಸಲು ಅಗತ್ಯ ನಿರ್ದೇಶನ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಸಂಪೂರ್ಣ ಐದು ವರ್ಷ ಪೂರೈಸಲಿದೆ. ಸಿದ್ದರಾಮಯ್ಯನವರು ಸರ್ಕಾರ ಉಳಿಸಲು ಪ್ರಾಮಾಣಿಕವಾಗಿ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೇರವಂತಿಕೆಯ ರಾಜಕಾರಣಿ. ಅವರಿಂದ ಸಮ್ಮಿಶ್ರ ಸರ್ಕಾರ ಉಳಲಿದೆ ಎಂಬ ಭ್ರಮೆ ಬೇಡ ಎಂದರು.