ಬೆಳಗಾವಿ: ಲೋಕಸಭಾ ಚುನಾವಣೆಗೆ ನಾನೇ ವಿಜಯಪುರದ ಅಭ್ಯರ್ಥಿ. ಸಿದ್ದರಾಮಯ್ಯನವರ ಅಪ್ಪನಾಣೆ ಮೋದಿಯೇ ಮುಂದಿನ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಅಪ್ಪನಾಣೆಗೂ ಮುಂದಿನ ಪ್ರಧಾನಿ ನರೇಂದ್ರ ಮೋದಿಯೇ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಮೂಲಕ ಹಿಂದೆ ಮೋದಿ ಅವರಪ್ಪನಾಣೆ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಜಿಗಜಿಣಗಿ ತಿರುಗೇಟು ನೀಡಿದ್ದಾರೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ನಾನು ಹಳೆಯ ದೋಸ್ತಿಗಳು. ನನ್ನ ಮತ್ತು ಅವನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. 40 ವರ್ಷದಿಂದಲೂ ಜತೆಯಲ್ಲಿಯೇ ಇದ್ದೇವೆ. ಯತ್ನಾಳ್ರನ್ನು ರಾಜಕೀಯವಾಗಿ ನಾನೇ ಬೆಳೆಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಭಿವೃದ್ಧಿ ಮಾಡಿದಕ್ಕೇ ನಿರಂತರವಾಗಿ ಆಯ್ಕೆ ಆಗುತ್ತಿದ್ದೇನೆ ಎಂದು ಹೇಳಿದರು.
ನಮ್ಮಪ್ಪನ ಆಣೆ ಅಲ್ಲ, ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೇ ಆಗುತ್ತಾರೆ. ನಾನು ಅಭಿವೃದ್ಧಿ ಮಾಡಿದ್ದಕ್ಕೆ ನಿರಂತರವಾಗಿ ಗೆಲುವು ಸಾಧಿಸುತ್ತ ಬಂದಿದ್ದೇನೆ.ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನೇ ವಿಜಯಪುರದ ಬಿಜೆಪಿ ಅಭ್ಯರ್ಥಿ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…